ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಹಾಗೂ ಐರ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಐರ್ಲೆಂಡ್ ಹಾಗೂ ಭಾರತ ನಡುವಿನ ಪಂದ್ಯಕ್ಕೆ ಇಲ್ಲಿನ ನಾಸೌ ಕೌಂಟಿ ಇಂಟರ್‌ನ್ಯಾಷನಲ್ ಸ್ಟೇಡಿಯಂ ಆತಿಥ್ಯ ವಹಿಸಿದೆ. ಭಾರತ ತಂಡವು ನಾಲ್ವರು ವೇಗಿಗಳು ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ. ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಸೇರಿದಂತೆ ಕೆಲವು ಆಟಗಾರರು ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.
ಭಾರತ ಈ ಬಾರಿ ಟ್ರೋಫಿ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದು, ಎಲ್ಲಾ ವಿಭಾಗದಲ್ಲಿ ಬಲಿಷ್ಠವಾಗಿ ತೋರುತ್ತಿದೆ. 17 ವರ್ಷಗಳ ಬಳಿಕ ಟೀಂ ಇಂಡಿಯಾ ಮತ್ತೊಮ್ಮೆ ಟಿ20 ಟ್ರೋಫಿಗೆ ಮುತ್ತಿಕ್ಕಲು ಕನಸು ಕಾಣುತ್ತಿದೆ.