ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಟಿ20 ವಿಶ್ವಕಪ್ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಿವೆ .ಪಾಕಿಸ್ತಾನ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ 147 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ್ದ ಪಾಕ್ 19.3 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 148 ರನ್ ಬಾರಿಸಿ ಗೆಲುವು ಸಾಧಿಸಿತು.
ಆರಂಭದಲ್ಲಿ ಸ್ಫೋಟಕ ಪ್ರದರ್ಶನಕ್ಕಿಳಿದಿದ್ದ ಪಾಕ್ ಹಾರಾಟಕ್ಕೆ ನೆದರ್ಲೆಂಡ್ ಬ್ರೇಕ್ ಹಾಕಿತ್ತು. ಪಾಕ್ 114 ರನ್‌ಗಳಿಗೆ ಪ್ರಮುಖ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದ್ರೆ ಕೊನೆಯಲ್ಲಿ ಫಹೀಮ್ ಅಶ್ರಫ್ ಬ್ಯಾಟಿಂಗ್ ನೆರವಿನಿಂದ ಗೆಲುವು ಸಾಧಿಸಿತು.
ಪಾಕ್ ಪರ ಸಾಹಿಬ್‌ಜಾದಾ ಫರ್ಹಾನ್ 47 ರನ್, ಸೈಮ್ ಅಯೂಬ್ 24 ರನ್, ಫಹೀಮ್ ಅಶ್ರಫ್ 29 ರನ್ ಗಳಿಸಿದ್ರೆ, ಉಳಿದೆಲ್ಲರೂ ಅಲ್ಪಮೊತ್ತಕ್ಕೆ ಔಟಾದರು.



