May 11, 2026
Monday, May 11, 2026
spot_img

ಟಿ20 ವಿಶ್ವಕಪ್ | ನೆದರ್ಲ್ಯಾಂಡ್ಸ್ ವಿರುದ್ಧ ಪಾಕಿಸ್ತಾನ ಗೆಲುವಿನ ಶುಭಾರಂಭ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಟಿ20 ವಿಶ್ವಕಪ್ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಿವೆ .ಪಾಕಿಸ್ತಾನ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ 147 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ್ದ ಪಾಕ್‌ 19.3 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 148 ರನ್‌ ಬಾರಿಸಿ ಗೆಲುವು ಸಾಧಿಸಿತು.

ಆರಂಭದಲ್ಲಿ ಸ್ಫೋಟಕ ಪ್ರದರ್ಶನಕ್ಕಿಳಿದಿದ್ದ ಪಾಕ್‌ ಹಾರಾಟಕ್ಕೆ ನೆದರ್ಲೆಂಡ್‌ ಬ್ರೇಕ್‌ ಹಾಕಿತ್ತು. ಪಾಕ್‌ 114 ರನ್‌ಗಳಿಗೆ ಪ್ರಮುಖ 7 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದ್ರೆ ಕೊನೆಯಲ್ಲಿ ಫಹೀಮ್‌ ಅಶ್ರಫ್‌ ಬ್ಯಾಟಿಂಗ್‌ ನೆರವಿನಿಂದ ಗೆಲುವು ಸಾಧಿಸಿತು.

ಪಾಕ್‌ ಪರ ಸಾಹಿಬ್‌ಜಾದಾ ಫರ್ಹಾನ್ 47 ರನ್‌, ಸೈಮ್‌ ಅಯೂಬ್‌ 24 ರನ್‌, ಫಹೀಮ್‌ ಅಶ್ರಫ್‌ 29 ರನ್‌ ಗಳಿಸಿದ್ರೆ, ಉಳಿದೆಲ್ಲರೂ ಅಲ್ಪಮೊತ್ತಕ್ಕೆ ಔಟಾದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !