March 9, 2026
Monday, March 9, 2026
spot_img

ಟಿ20 ವಿಶ್ವಕಪ್‌ | ‘ಕ್ರಿಕೆಟ್ ದಂತಕಥೆ’ ನನ್ನ ಯಶಸ್ಸಿನ ಸೀಕ್ರೆಟ್ ಎಂದ ಸಂಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ 2026ರಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನದೊಂದಿಗೆ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದವರು ಆರಂಭಿಕ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್.

ಫೈನಲ್ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ಕೇವಲ 46 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 5 ಬೌಂಡರಿಗಳ ನೆರವಿನಿಂದ 89 ರನ್ ಗಳಿಸಿದರು. ಅವರ ಈ ಅದ್ಭುತ ಇನಿಂಗ್ಸ್‌ನಿಂದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 255 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು.

ಈ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡ ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿ ಕೇವಲ 159 ರನ್‌ಗಳಿಗೆ ಆಲೌಟ್ ಆಯಿತು. ಪರಿಣಾಮ ಭಾರತ 96 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿ ವಿಶ್ವಕಪ್ ಕಿರೀಟವನ್ನು ತಮ್ಮದಾಗಿಸಿಕೊಂಡಿತು.

ಇದನ್ನೂ ಓದಿ:

ಇಡೀ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್‌ಗೆ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿಯೂ ಸಿಕ್ಕಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಂಜು ತಮ್ಮ ಯಶಸ್ಸಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ನೀಡಿದ ಮಾರ್ಗದರ್ಶನ ಕಾರಣ ಎಂದು ಅವರ ಸೀಕ್ರೆಟ್ ಬಿಚ್ಚಿಟ್ಟರು.

ನ್ಯೂಜಿಲೆಂಡ್ ವಿರುದ್ಧದ ಸರಣಿಯ ವೈಫಲ್ಯದ ಬಳಿಕ ಆತ್ಮವಿಶ್ವಾಸ ಕಳೆದುಕೊಂಡಿದ್ದ ವೇಳೆ ಸಚಿನ್ ತಮ್ಮೊಂದಿಗೆ ಮಾತನಾಡಿ ಮಾನಸಿಕ ಧೈರ್ಯ ತುಂಬಿದ್ದರು. ಅವರ ಸಲಹೆಗಳು ಮತ್ತು ಪ್ರೇರಣೆ ನನ್ನ ಪ್ರದರ್ಶನಕ್ಕೆ ದೊಡ್ಡ ಬೆಂಬಲ ನೀಡಿದವು ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !