March 21, 2026
Saturday, March 21, 2026
spot_img

ಟಿ20 ವಿಶ್ವಕಪ್‌ | ಸೀಫರ್ಟ್‌, ಆಲೆನ್‌ ಜೊತೆಯಾಟ: ಯುಎಇ ವಿರುದ್ಧ ನ್ಯೂಜಿಲೆಂಡ್‌ ಗೆ ಭರ್ಜರಿ ಗೆಲುವು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್‌ ನಲ್ಲಿ ಟಿಮ್‌ ಸೀಫರ್ಟ್‌ ಹಾಗೂ ಫಿನ್‌ ಆಲೆನ್‌ ಅವರ ದಾಖಲೆಯ ಜೊತೆಯಾಟದ ಬಲದಿಂದ ನ್ಯೂಜಿಲೆಂಡ್‌ ಯುಎಇ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಯುಎಇ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 20 ಓವರ್‌ಗಳಿಗೆ 6 ವಿಕೆಟ್‌ಗಳಿಗೆ 173 ರನ್ ಗಳಿಸಿತು. ಆ ಮೂಲಕ ನ್ಯೂಜಿಲೆಂಡ್ ತಂಡಕ್ಕೆ 174 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಹಿಂಬಾಲಿಸಿದ ನ್ಯೂಜಿಲೆಂಡ್ ಆರಂಭಿಕರಾದ ಟಿಮ್ ಸೀಫರ್ಟ್ ಮತ್ತು ಫಿನ್ ಅಲೆನ್ ಸ್ಫೋಟಕ ಆಟವಾಡಿದರು. 16ನೇ ಓವರ್‌ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಇದು ಟಿ20 ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ವಿಕೆಟ್ ಕಳೆದುಕೊಳ್ಳದೆ ಅತಿ ಹೆಚ್ಚು ರನ್ ಚೇಸ್ ಆಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !