February 18, 2026
Wednesday, February 18, 2026
spot_img

ಟಿ20 ವಿಶ್ವಕಪ್ | ಕೊನೆಯ ಲೀಗ್ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜು: ನೆದರ್ಲ್ಯಾಂಡ್ಸ್ ವಿರುದ್ಧ ಟಾಸ್ ಗೆದ್ದ ಸೂರ್ಯ ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: :

ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಇಂದು ತನ್ನ ಕೊನೆಯ ಲೀಗ್ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಆಡುತ್ತಿದೆ.ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್, ನೆದರ್ಲ್ಯಾಂಡ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಕುಲ್ದೀಪ್ ಯಾದವ್ ಬದಲಿಗೆ ಅರ್ಶ್ದೀಪ್ ಸಿಂಗ್ ತಂಡಕ್ಕೆ ಮರಳಿದ್ದು, ಅಕ್ಷರ್ ಪಟೇಲ್ ಬದಲಿಗೆ ವಾಷಿಂಗ್ಟನ್ ಸುಂದರ್ ಆಡುತ್ತಿದ್ದಾರೆ.

ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಭಾರತ ಗೆಲುವುಗಳನ್ನು ದಾಖಲಿಸಿದೆ. ಸೂಪರ್ -8 ಹಂತಕ್ಕೆ ಟಿಕೆಟ್ ಖಚಿತ ಪಡಿಸಿಕೊಂಡಿದೆ .

ಉಭಯ ತಂಡಗಳು
ಭಾರತ ತಂಡ: ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ನೆದರ್ಲ್ಯಾಂಡ್ಸ್: ಮೈಕೆಲ್ ಲೆವಿಟ್, ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೇಡೆ, ಕಾಲಿನ್ ಅಕರ್ಮನ್, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಜ್ಯಾಕ್ ಲಿಯಾನ್-ಕ್ಯಾಚೆಟ್, ನೋಹ್ ಕ್ರೂಸ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ಕೈಲ್ ಕ್ಲೈನ್.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !