ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸುವಲ್ಲಿ ಯಶಸ್ಸಿಯಾಗಿದೆ.ಈ ಮೂಲಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 5 ವಿಕೆಟ್ ಸೋಲು ಅನುಭವಿಸಿದೆ.
ಭಾರತ ನೀಡಿದ್ದ 134 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಹರಿಣಗಳ ಪಡೆ ಇನ್ನೂ ಎರಡು ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದೆ. ಇದರಿಂದ ಪಾಕಿಸ್ತಾನ ತಂಡದ ಸೆಮೀಸ್ ಹಾದಿ ಬಹುತೇಕ ಅಂತ್ಯವಾಗಿದೆ.
ಪಂದ್ಯದ ಅಂತಿಮ ಘಟ್ಟ ರೋಚಕವಾಗಿತ್ತು. ಕೊನೆಯ ಓವರ್‌ನಲ್ಲಿ ದಕ್ಷಿಣ ಆಫ್ರಿಕಾ ಗೆಲ್ಲಲು 6 ರನ್‌ಗಳ ಅಗತ್ಯವಿತ್ತು. ಭುವನೇಶ್ವರ್ ಕುಮಾರ್ ಕೊನೆಯ ಓವರ್ ಬೌಲಿಂಗ್ ಮಾಡುವ ಜವಾಬ್ದಾರಿ ಹೊತ್ತುಕೊಂಡರು. ಆದರೆ ಕೊನೆಯ ಓವರ್‌ನಲ್ಲಿ ಮಿಲ್ಲರ್ ಎರಡು ಬೌಂಡರಿ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.