ಟಿ20 ವಿಶ್ವಕಪ್ ಟೂರ್ನಿ: ಬುಮ್ರಾ ಬದಲಿಗೆ ಟೀಮ್ ಇಂಡಿಯಾ ಸೇರಿಕೊಂಡ ಮೊಹಮ್ಮದ್ ಶಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟಿ20 ವಿಶ್ವಕಪ್ ಟೂರ್ನಿಗೆ ಜಸ್ಪ್ರೀತ್ ಬುಮ್ರಾ ಬದಲಿಗೆ ಅನುಭವಿ ವೇಗಿ ಮೊಹಮ್ಮದ್ ಶಮಿ ಟೀಂ ಇಂಡಿಯಾ ಕೂಡಿಕೊಂಡಿದ್ದಾರೆ.
ಬಿಸಿಸಿಐ ಈ ವಿಚಾರವನ್ನು ಖಚಿತಪಡಿಸಿದ್ದು, ವೇಗಿ ಶಮಿ, ಬ್ರಿಸ್ಬೇನ್‌ನಲ್ಲಿ ಭಾರತ ತಂಡವನ್ನು ಕೂಡಿಕೊಂಡಿದ್ದಾರೆ.

ಅಖಿಲ ಭಾರತ ಸೀನಿಯರ್ ಆಯ್ಕೆ ಸಮಿತಿಯು ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಜಸ್ಪ್ರೀತ್ ಬುಮ್ರಾ ಬದಲಿ ಆಟಗಾರನ ರೂಪದಲ್ಲಿ ಮೊಹಮ್ಮದ್ ಶಮಿಯನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿದೆ. ಮೊಹಮ್ಮದ್ ಶಮಿ ಈಗಾಗಲೇ ಆಸ್ಟ್ರೇಲಿಯಾ ತಲುಪಿದ್ದು, ಅಭ್ಯಾಸ ಪಂದ್ಯಕ್ಕೂ ಮುನ್ನ ಬ್ರಿಸ್ಬೇನ್‌ನಲ್ಲಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಮೀಸಲು ಆಟಗಾರರಾಗಿ ಮೊಹಮ್ಮದ್ ಸಿರಾಜ್ ಹಾಗೂ ಬೌಲಿಂಗ್ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಕೂಡಾ ಸ್ಥಾನ ಪಡೆದಿದ್ದಾರೆ.

ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆರ್ಶದೀಪ್ ಸಿಂಗ್, ಮೊಹಮ್ಮದ್ ಶಮಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!