March 22, 2026
Sunday, March 22, 2026
spot_img

ಟಿ20 ವಿಶ್ವಕಪ್ | ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಯುಎಸ್ಎ ಬೌಲಿಂಗ್ ಆಯ್ಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: :

ಟಿ20 ವಿಶ್ವಕಪ್ ನ ಮೂರನೇ ಪಂದ್ಯದಲ್ಲಿ ಇಂದು ಯುಎಸ್ಎ ,ಟೀಮ್ ಇಂಡಿಯಾ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದು ಯುಎಸ್ಎ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು,. ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದು ಯುನೈಟೆಡ್ ಸ್ಟೇಟ್ಸ್ ವಿರುದ್ಧ ಭಾರತದ ಎರಡನೇ ಪಂದ್ಯವಾಗಿದೆ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್.

ಯುಎಸ್​ಎ ತಂಡ: ಸೈತೇಜ ಮುಕ್ಕಮಲ್ಲ, ಆಂಡ್ರೀಸ್ ಗಾಸ್ (ವಿಕೆಟ್ ಕೀಪರ್), ಮೊನಾಂಕ್ ಪಟೇಲ್ (ನಾಯಕ), ಮಿಲಿಂದ್ ಕುಮಾರ್, ಸಂಜಯ್ ಕೃಷ್ಣಮೂರ್ತಿ, ಹರ್ಮೀತ್ ಸಿಂಗ್, ಶುಭಂ ರಂಜನೆ, ಮೊಹಮ್ಮದ್ ಮೊಹ್ಸಿನ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸೌರಭ್ ನೇತ್ರವಾಲ್ಕರ್, ಅಲಿ ಖಾನ್.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !