ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಟಿ20 ವಿಶ್ವಕಪ್ ನ ಬಹುನಿರೀಕ್ಷಿತ INd vs PAK ಪಂದ್ಯ ಇಂದು ಮೇಲ್ಬೋರ್ನ್ ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆಯಲಿದ್ದು ಕ್ಷಣಗಣನೆ ಆರಂಭವಾಗಿದೆ. ಕಳೆದ ವರ್ಷದ ವರೆಗೂ ಟೀಮ್ ಇಂಡಿಯಾ 50 ಓವರ್ ಹಾಗೂ 20 ಓವರ್‌ಗಳ ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ವಿರುದ್ಧ ಸೋಲಿಲ್ಲದ ಸರದಾರನಾಗಿ ಮೆರೆದಿತ್ತು. ಒಂದು ವರ್ಷದ ಹಿಂದೆ 2021ರ ಅ.24, 2021ರಂದು ದುಬೈನಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು ಪರಸ್ಪರ ಎದುರಾಗಿದ್ದವು. ಪಾಕಿಸ್ತಾನವು ಮೊದಲ ಬಾರಿಗೆ ವಿಶ್ವಕಪ್‌ನಲ್ಲಿ ಭಾರತವನ್ನು ಸೋಲಿಸಿ ಸಂಭ್ರಮಿಸಿತ್ತು. ಇದೀಗ ಹೊಸ ಉತ್ಸಾಹ, ಹೊಸ ಯೋಜನೆ, ತಂತ್ರಗಾರಿಕೆಯೊಂದಿಗೆ ಉಭಯ ತಂಡಗಳೂ ಕಣಕ್ಕಿಳಿಯಲು ಸಜ್ಜಾಗಿವೆ.
ಈ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಭಾರತದ ಕೋಚ್ ಬಲಿಷ್ಠ ಆಟಗಾರರನ್ನು ಇಳಿಸಲು ಚಿಂತಿಸಿದ್ದು ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಿದರೆ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನದಲ್ಲಿ ಆಡಲಿದ್ದಾರೆ.
ನಂತರ ಹಾರ್ದಿಕ್ ಪಾಂಡ್ಯ ಆಡಲಿದ್ದು. ಆರನೇ ಸ್ಥಾನದಲ್ಲಿ ದಿನೇಶ್ ಕಾರ್ತಿಕ್ ಅಥವಾ ರಿಷಭ್ ಪಂತ್ ಪೈಕಿ ಯಾರಿಗೆ ಸ್ಥಾನ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲಗಳ ಪ್ರಕಾರ ಪಂತ್ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಉತ್ತಮ ಫಿನಿಶರ್ ಆಗಿರುವ ಕಾರ್ತಿಕ್ ಈ ಸ್ಥಾನದಲ್ಲ ಆಲ್ ರೂಂಡರ್ ಜವಾಬ್ದಾರಿ ನಿರ್ವಹಿಸಲಿದ್ದು ಅವರ ಜೊತೆಗೆ ಅಕ್ಷರ್ ಪಟೇಲ್ ಆ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಬೌಲಿಂಗ್ ನಲ್ಲಿ ಆರ್. ಅಶ್ವಿನ್ ಅಥವಾ ಯುಜುವೇಂದ್ರ ಚಹಲ್ ರಲ್ಲಿ ಒಬ್ಬರಿದ್ದರೆ ವೇಗಿಗಳಾಗಿ ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ ಮಿಂಚಲಿದ್ದಾರೆ. ಜೊತೆಗೆ ಅರ್ಶದೀಪ್ ಸಿಂಗ್ ಕೂಡ ಆಡಲಿದ್ದಾರೆ. ಶಮಿ ಬದಲು ಹರ್ಷಲ್ ಪಟೇಲ್ ಕೂಡ ಆಯ್ಕೆಯಾಗಬಹುದು ಎನ್ನಲಾಗಿದೆ.
ಸಂಭವನೀಯ ಆಟಗಾರರ ಪಟ್ಟಿ ಹೀಗಿದೆ:
ಭಾರತ: ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್/ ಮೊಹಮ್ಮದ್ ಶಮಿ, ಯುಜುವೇಂದ್ರ ಚಹಲ್/ ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಆರ್ಶದೀಪ್ ಸಿಂಗ್.
ಪಾಕಿಸ್ತಾನ: ಬಾಬರ್ ಆಜಂ(ನಾಯಕ), ಮೊಹಮ್ಮದ್ ರಿಜ್ವಾನ್, ಶಾನ್ ಮಸೂದ್, ಹೈದರ್ ಅಲಿ, ಇಫ್ತಿಕಾರ್ ಅಹಮ್ಮದ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಶಾದಾಬ್ ಅಹಮದ್, ನಸೀಂ ಶಾ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.