spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಾಳೆ ಸಿಎಂ ಯಡಿಯೂರಪ್ಪ ಅವರಿಂದ ರಾಜ್ಯದ 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ 430 ಸರಕಾರಿ ಪ್ರಥಮ ದರ್ಜೆ ಕಾಲೇಜು, 87 ಸರಕಾರಿ ಪಾಲಿಟೆಕ್ನಿಕ್ ಹಾಗೂ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ನಾಳೆ ಸಿಎಂ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.
ಈ ಯೋಜನೆಯ ಬಗ್ಗೆ ವಿವರಿಸಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿಎ.ನ್.‌ಅಶ್ವತ್ಥ ನಾರಾಯಣ, ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್‌ ಅಂತರವೂ ಅಳಿಸಿಹಾಕುವ ಧ್ಯೇಯದೊಂದಿಗೆ ಸರಕಾರ ಇಷ್ಟು ಬೃಹತ್‌ ಪ್ರಮಾಣದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸುತ್ತಿದೆ ಎಂದು ತಿಳಿಸಿದರು.
ಈ ಯೋಜನೆಗಾಗಿ 163 ಕೋಟಿ ಹಣವನ್ನು ವೆಚ್ಚ ಮಾಡಲಾಗುತ್ತಿದೆ. ಇದರ ಜತೆಯಲ್ಲೇ ಸರಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್‌ ಕ್ಲಾಸ್‌ ರೂಂಗಳಿಗೆ ಚಾಲನೆ ನೀಡಲಾಗುತ್ತಿದೆ.
ಈಗಾಗಲೇ ಕಲಿಕಾ ನಿರ್ವಹಣಾ ವ್ಯವಸ್ಥೆ ಅನುಷ್ಠಾನಕ್ಕೆ ಬಂದಿದೆ. ಅದರಂತೆ ವಿದ್ಯಾರ್ಥಿಗಳು ಸುಲಭ ವ್ಯಾಸಂಗಕ್ಕೆ ಈ ಟ್ಯಾಬ್ಲೆಟ್‌ಗಳು ಸಹಾಯಕ. ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇವು ಪೂರಕ. ಇಂದಿನ ಜಾಗತಿಕ ಮಟ್ಟದ ಆಧುನಿಕ ಕಲಿಕಾ ಮಟ್ಟಕ್ಕೆ ತಕ್ಕಂತೆ ಕಲಿಕೆಯನ್ನು ನಿರಂತರವಾಗಿ ಮುಂದುವರಿಸುವುದು ಹಾಗೂ ಆನ್‌ಲೈನ್‌ ಮೂಲಕವೇ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ಗಳು ನೆರವಾಗುತ್ತವೆ.ಈ ಟ್ಯಾಬ್ಲೆಟ್‌ಗಳು ಉತ್ತಮವಾಗಿವೆ ಹಾಗೂ ಕಲಿಕೆಗೆ ಬೇಕಾದ ಎಲ್ಲ ಫೀಚರುಗಳನ್ನು ಒಳಗೊಂಡಿವೆ. ವೈಫೈ, ಸಿಮ್‌ ಬಳಕೆಯಿಂದ ಇವುಗಳಿಗೆ ಇಂಟರ್‌ನೆಟ್‌ ಸಂಪರ್ಕ ಕಲ್ಪಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್‌ ಬಳಕೆಯ ಮೂಲಕವೇ ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳಬಹುದು.
ಸರಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ಎಲ್ಲ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರಾಗಿದ್ದು ಅವರ ಕಲಿಕೆಗೆ ಹೆಗಲು ಕೊಡಬೇಕಾದ ಹೊಣೆಗಾರಿಕೆ ಸರಕಾರದ್ದು. ಇಂಥ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ಗಳನ್ನು ನೀಡುವ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸರಕಾರಿ-ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಡಿಜಿಟಲ್‌ ತಾರತಮ್ಯವನ್ನು ಸಂಪೂರ್ಣವಾಗಿ ಅಳಿಸಿ ಹಾಕಲು ನೆರವಾಗುತ್ತದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss