Friday, September 29, 2023

Latest Posts

ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಠಾಗೋರ್ ‘ಶಾಂತಿನಿಕೇತನ’!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಸಾಹಿತಿ ರಬೀಂದ್ರನಾಥ್ ಠಾಗೋರ್ ಅವರು ಬದುಕಿ ಬಾಳಿದ ಮನೆ ಸೇರ್ಪಡೆಯಾಗಿದೆ.

ಯುನೆಸ್ಕೋ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಘೋಷಿಸಲಾಗಿದ್ದು, ಪಾರಂಪರಿಕ ಪಟ್ಟಿಗೆ ಶಾಂತಿನಿಕೇತನ ಸೇರ್ಪಡೆ ಘೋಷಣೆ ಹೊರಬೀಳುತ್ತಿದ್ದಂತೆ ಭಾರತದ ಅಧಿಕಾರಿಗಳು ಧನ್ಯವಾದ, ಭಾರತ್ ಮಾತಾ ಕಿ ಜೈ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಬೀರ್ಮುಮ್ ಜಿಲ್ಲೆಯಲ್ಲಿರುವ ಶಾಂತಿನಿಕೇತನ ಯುನೆಸ್ಕೋ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆಯಾಗುವ ಮೂಲಕ ಭಾರತದ 41 ತಾಣಗಳು ಈ ಪಟ್ಟಿಗೆ ಸೇರಿದ ಹೆಗ್ಗಳಿಗೆ ಪಡೆದುಕೊಂಡಿದೆ.

ಶಾಂತಿನಿಕೇತನವನ್ನು ರವೀಂದ್ರನಾಥ ಟಾಗೋರ್‌ನವರ ತಂದೆ ಮಹರ್ಷಿ ದೇವೇಂದ್ರನಾಥ್‌ರವರು 1863ರಲ್ಲಿ ಪಶ್ಚಿಮ ಬಂಗಾಳದ ಬೀರ್‌ಭೂಂನಲ್ಲಿ ಸ್ಥಾಪಿಸಿದ್ದರು. ನಂತರ ರವೀಂದ್ರನಾಥ್‌ ಟಾಗೋರರು ಮುನ್ನಡೆಸಿಕೊಂಡು ಅದನ್ನು ವಿಶ್ವ ಭಾರತಿ ಎಂಬ ವಿಶ್ವ ವಿದ್ಯಾಲಯವನ್ನಾಗಿಸಿದರು.

ಶಾಂತಿನಿಕೇತನ ಮನೆ ಭಾರತದ ಇತಿಹಾಸದಲ್ಲಿ ಪ್ರಮುಖ ಕೇಂದ್ರಬಿಂದುವಾಗಿದೆ. ಇದೇ ಶಾಂತಿನಿಕೇತನದಲ್ಲಿ ರಬೀಂದ್ರನಾಥ್ ಠಾಗೋರ್ ಹಲವು ಸಭೆಗಳನ್ನು ನಡೆಸಿದ್ದಾರೆ. ಇದರಲ್ಲಿ ಪ್ರಮುಖವಾಗಿ ಮಹಾತ್ಮಾ ಗಾಂಧಿ ಜೊತೆಗೆ ಹಲವು ಸಭೆಗಳು ನಡೆದಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈ ಮನೆ ಪ್ರಮುಖ ಪಾತ್ರ ನಿರ್ವಹಿಸಿದೆ.

ಭಾರತದ 41 ತಾಣಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. 2021ರಲ್ಲಿ ಗಂಗಾವತಿ ತಾಲೂಕಿನ ಹಿರೇಬೆಣಕಲ್‌ನ ಮೌರ್ಯರ ಕಾಲದ ಶಿಲಾಯುಗ ಪ್ರದೇಶವನ್ನು ಯುನೆಸ್ಕೋ ಪಟ್ಟಿಗೆ ಸೇರ್ಪಡಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!