ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ತಹವ್ವೂರ್ ರಾಣಾನನ್ನು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿದೆ.
ಮಧ್ಯಾಹ್ನ 3 ಗಂಟೆಗೆ ದೆಹಲಿಯ ಪಾಲಂ ಏರ್‌ಪೋರ್ಟ್‌ನಲ್ಲಿ ವಿಮಾನ ಲ್ಯಾಂಡ್ ಆಗಿದೆ. ದೆಹಲಿಯಲ್ಲಿ ಎನ್‌ಐಎ ಬಂಧನ ಪ್ರಕ್ರಿಯೆ ನಡೆಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ.
ಭಾರತಕ್ಕೆ ಗಡೀಪಾರಾಗುವುದರಿಂದ ತಪ್ಪಿಸಿಕೊಳ್ಳಲು ರಾಣಾ ಅಮೆರಿಕದ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದ. ಆದರೆ, ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತು. ಇಂದು ಭಾರತಕ್ಕೆ ತಹವ್ವೂರ್ ರಾಣಾನನ್ನು ಕರೆತರಲಾಗಿದೆ.