ಬದ್ಗಾಮ್​ ನಲ್ಲಿ ತಹಸೀಲ್ದಾರ್ ಕಚೇರಿ ನೌಕರನ ಮೇಲೆ ಶಂಕಿತ ಉಗ್ರನಿಂದ ಗುಂಡಿನ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬದ್ಗಾಮ್​ ಜಿಲ್ಲೆಯ ಚದೂರ್ ಪ್ರದೇಶದಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ರಾಹುಲ್ ಭಟ್ ಎಂಬ ನೌಕರನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ, ಪರಾರಿಯಾಗಿದ್ದಾನೆ. ಗಾಯಗೊಂಡಿರುವ ಉದ್ಯೋಗಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಧ್ಯ ಕಾಶ್ಮೀರದ ಬದ್ಗಾಮ್​​ ಜಿಲ್ಲೆಯಲ್ಲಿ ಶಂಕಿತ ಉಗ್ರರು ಈ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಕಾಶ್ಮೀರ ಪೊಲೀಸರು ಅಧಿಕೃತ ಟ್ವಿಟರ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರುವ ರಾಹುಲ್​ ಭಟ್​ ಎಂಬ ನೌಕರನ ಮೇಲೆ ಉಗ್ರರು ದಾಳಿ ನಡೆಸಿದ್ದಾಗಿ ತಿಳಿಸಿದ್ದು, ಸದ್ಯ ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ನೀಡಿದೆ. ಘಟನಾ ಸ್ಥಳದಲ್ಲಿ ಈಗಾಗಲೇ ಭದ್ರತಾ ಸಿಬ್ಬಂದಿ ಉಗ್ರನಿಗೋಸ್ಕರ ಶೋಧಕಾರ್ಯ ನಡೆಸುತ್ತಿದ್ದಾರೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!