Wednesday, August 10, 2022

Latest Posts

ತಾಜ್ ಮಹಲ್‌ಗೆ ಬಾಂಬ್‌ ಬೆದರಿಕೆ: ಅನಾಮಧೇಯ ವ್ಯಕ್ತಿಯಿಂದ ಕರೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ತಾಜ್ ಮಹಲ್‌ನಲ್ಲಿ ಬಾಂಬ್ ಇರುವುದಾಗಿ ಅನಾಮಧೇಯ ಕರೆ ಬಂದಿದ್ದು, ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ತಾಜ್‌ಮಹಲ್‌ನಲ್ಲಿ ಬಾಂಬ್ ಇದೆ ಎಂದು ಭದ್ರತಾ ಸಿಬ್ಬಂದಿಗೆ ಕರೆ ಬಂದಂತೆಯೇ ಆತಂಕದ ವಾತಾವರಣ ಸೃಷ್ಟಿಯಾಗಿದೆ. ತಕ್ಷಣ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಶೋಧ ನಡೆಸಿದ್ದಾರೆ.
ತಕ್ಷಣವೇ ತಾಜ್ ಮಹಲ್‌ನಿಂದ ಪ್ರವಾಸಿಗರನ್ನು ಹೊರಗೆ ಕಳುಹಿಸಿ, ಎಲ್ಲಾ ದ್ವಾರಗಳನ್ನು ಬಂದ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss