ಒಂದು ದಿನ ರಜೆ ಹಾಕಿ ಜನ್ಮದಿನ ಆನಂದಿಸಿ: ಪ್ರಧಾನಿ ಮೋದಿಗೆ ಶಾರುಖ್ ಖಾನ್ ಸಲಹೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜನ್ಮದಿನ ಸಂಭ್ರಮ.ಹೀಗಾಗಿ ಅನೇಕ ಗಣ್ಯರು ವಿಶ್ ಮಾಡುತ್ತಿದ್ದಾರೆ. ದೇಶ ವಿದೇಶಗಳಿಂದ ಶುಭಾಶಯಗಳ ಸುರಿಮಳೆ ಬರುತ್ತಿದೆ. ರಾಜಕೀಯ, ಸಿನಿಮಾರಂಗ, ಕ್ರೇಡೆ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಈ ಪೈಕಿ ಬಾಲಿವುಡ್ ಸ್ಟಾರ್ ಕಿಂಗ್ ಖಾನ್ ಶಾರುಖ್ ಖಾನ್ ಪ್ರಧಾನಿ ಮೋದಿಗೆ ವಿಶ್ ಮಾಡಿ ಒಂದು ದಿನ ರಜೆ ಹಾಕಿ ಹುಟ್ಟುಹಬ್ಬ ಆನಂದಿಸಿ ಎಂದು ಮನವಿ ಮಾಡಿದ್ದಾರೆ.

ಪ್ರಧಾನಿಮೋದಿ ಅವರ ಜನ್ಮದಿನಕ್ಕೆ ಶಾರುಖ್ ವಿಶ್ ಮಾಡಿದ್ದಾರೆ. ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ‘ನಮ್ಮ ದೇಶದ ಕಲ್ಯಾಣಕ್ಕಾಗಿ ನಿಮ್ಮ ಬದ್ಧತೆಗೆ ಇಡೀ ದೇಶದ ಜನತೆ ನಿಮ್ಮನ್ನು ಪ್ರಶಂಸಿಸುತ್ತಿದೆ. ನಿಮ್ಮ ಎಲ್ಲಾ ಗುರಿಗಳನ್ನು ಸಾಧಿಸಲು ಹೆಚ್ಚು ಶಕ್ತಿ ಮತ್ತು ಆರೋಗ್ಯ ಸಿಗಲಿ. ಇವತ್ತು ಒಂದು ದಿನ ರಜೆ ಹಾಕಿ ಜನ್ಮದಿನವನ್ನು ಆನಂದಿಸಿ. ಹುಟ್ಟುಹಬ್ಬದ ಶುಭಾಶಯಗಳು ಪ್ರಧಾನಿ ನರೇಂದ್ರ ಮೋದಿ’ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!