March 15, 2026
Sunday, March 15, 2026
spot_img

ಆರ್‌ಎಸ್‌ಎಸ್ ವಿರುದ್ಧ ತಮಿಳುನಾಡಿನಂತೆ ಕರ್ನಾಟಕದಲ್ಲೂ ಕ್ರಮ ಕೈಗೊಳ್ಳಿ: ಬಿ ಕೆ ಹರಿಪ್ರಸಾದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಹಿರಿಯ ನಾಯಕ ,ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರ್‌ಎಸ್‌ಎಸ್ ಸಂಘಟನೆಯ ಶಾಖೆ ಚಟುವಟಿಕೆಗಳ ಬಗ್ಗೆ ಕಿಡಿಕಾರಿದ್ದು, ಸರ್ಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ನಡೆಸುವ ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆರ್‌ಎಸ್‌ಎಸ್ ಸಂಘಟನೆ ಕರ್ನಾಟಕ ರಾಜ್ಯದಾದ್ಯಂತ ನಿರಂತರವಾಗಿ ಶಾಖೆಗಳನ್ನು ನಡೆಸುತ್ತಿದೆ. ಆದರೆ ಈ ಕಾರ್ಯಕ್ರಮಗಳಿಗೆ ಯಾವುದೇ ಅಧಿಕೃತ ಅನುಮತಿ ಪಡೆಯದೆ ಸರ್ಕಾರಿ ಜಾಗಗಳನ್ನು ಬಳಸುತ್ತಿರುವುದು ಕಾನೂನು ಉಲ್ಲಂಘನೆ ಎಂದು ಆರೋಪಿಸಿದ್ದಾರೆ.

ಆರ್‌ಎಸ್‌ಎಸ್ ಅವರು ಭಾರತ ದೇಶದ ತಾಲಿಬಾನಿಗಳು.ಸರಕಾರದಲ್ಲಿ ನೋಂದಾಯಿಸದ ಸಂಘಟನೆಯಾಗಿದೆ. ಅವರು ತಮ್ಮ ಸಂಸ್ಥೆ ರಿಜಿಸ್ಟರ್ ಆಗಿರುವುದನ್ನು ತೋರಿಸಲಿ. ನೋಂದಣಿ ಇಲ್ಲದೆ ಇಷ್ಟು ವರ್ಷಗಳಿಂದ ಸರ್ಕಾರಿ ಜಾಗಗಳಲ್ಲಿ ಚಟುವಟಿಕೆ ನಡೆಸುತ್ತಿದ್ದಾರೆ. ಪ್ಯಾಲೇಸ್ತೀನ್ ಪರವಾಗಿ ಪ್ರತಿಭಟನೆ ಮಾಡಿದರೆ ಪೊಲೀಸರಿಂದ ತಕ್ಷಣ ಬಂಧನವಾಗುತ್ತದೆ. ಆದರೆ ಆರ್‌ಎಸ್‌ಎಸ್ ಶಾಖೆಗಳನ್ನು ಸರ್ಕಾರಿ ಮೈದಾನಗಳಲ್ಲಿ ನಡೆಸಲು ಪೊಲೀಸರು ಅನುಮತಿ ನೀಡುತ್ತಾರೆ. ಇದೇಕೆ ಎಂಬುದನ್ನು ನಾನು ಪ್ರಶ್ನಿಸುತ್ತಿದ್ದೇನೆ ಎಂದು ಹೇಳಿದರು.

ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸಲು ಹೋದ ಆರ್‌ಎಸ್‌ಎಸ್ ಸದಸ್ಯರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಬಂಧಿಸಿ ಕೇಸ್‌ಗಳನ್ನೂ ದಾಖಲಿಸಲಾಗಿದೆ. ಇದೇ ರೀತಿಯ ಕ್ರಮವನ್ನು ಕರ್ನಾಟಕದಲ್ಲಿಯೂ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !