ದಿಗಂತ ವರದಿ ಶಿವಮೊಗ್ಗ :
ತಾಲೂಕಿನ ಉಂಬ್ಳೆಬೈಲು, ಕಡೆಕಲ್ಲು ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಅವುಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಈಗಾಲೇ ಆನೆಗಳ ಹಾವಳಿಯಿಂದಾಗಿ ರೈತರಿಗೆ ಸಾಕಷ್ಟು ನಷ್ಟವಾಗಿದೆ. ಅಂತಹ ರೈತರಿಗೆ ಪರಿಹಾರ ನೀಡಬೇಕು. ಅರಣ್ಯ ಮತ್ತು ಕಂದಾಯ ಭೂಮಿ ಬಗ್ಗೆ ಸಮಸ್ಯೆ ಇರುವುದರಿಂದ ಈ ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಬಿಸು ಗ್ರಾಮದಲ್ಲಿ ಎರಡು ಸಾವಿರ ಅಡಿಕೆ ಸಸಿ ಕಡಿದ ಪ್ರಕರಣ ಶೀಘ್ರ ಇತ್ಯರ್ಥ ಮಾಡಬೇಕು. ಇದನ್ನು ಇತ್ಯರ್ಥ ಮಾಡದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮನವಿಯಲ್ಲಿ ಎಚ್ಚರಿಸಲಾಗಿದೆ.