Tuesday, February 27, 2024

ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಿರಿ: ಸರಕಾರಕ್ಕೆ ಹರಿಪ್ರಸಾದ್ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಪರ ಹೋರಾಟಗಾರರ ಮೇಲೆ ಹಾಕಿರುವ ಕೇಸನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (BK Hariprasad) ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಕನ್ನಡದಲ್ಲಿ ಫಲಕ (Nameboard) ಇರಬೇಕು ಎಂಬುದು ಸತ್ಯವೇ. ಕಾನೂನು ಕೈಗೆತ್ತಿಕೊಳ್ಳದೇ ಫಲಕಗಳನ್ನು ಬದಲಾಯಿಸಿ. ನಿಧಾನವಾಗಿ ಎಲ್ಲವೂ ಸರಿ ಹೋಗುತ್ತದೆ. ಕನ್ನಡ ಹೋರಾಟಗಾರರ ಮೇಲೆ, ನಮ್ಮ ಮೇಲೂ ಬಹಳಷ್ಟು ಕೇಸ್‌ಗಳೂ ಬಾಕಿ ಇವೆ. ನೆಲ, ಜಲ ಭಾಷೆಯ ವಿಚಾರದಲ್ಲಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ನಾನೂ ಕೂಡ ಗೃಹ ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!