ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆ ನೀಡಿದ್ದಾರೆ.
ದೇವದಾಸಿ ಪದ್ಧತಿ ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಎಸ್ ಪಿ, ಡಿಸಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ? ಈ ಬಗ್ಗೆ ವಿವರ ಕೊಡಿ ಎಂದು ಸಿಎಂ ಸೂಚಿಸಿದ್ದಾರೆ.