ಮಳೆಯಿಂದಾಗಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಸಂಸದ ಹೆಗಡೆ ಸೂಚನೆ

ಹೊಸದಿಗಂತ ವರದಿ,ಕಾರವಾರ:

ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಹೆದ್ದಾರಿ ಅಕ್ಕ ಪಕ್ಕದ ಗ್ರಾಮಗಳಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮಳೆಯಿಂದಾಗಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಂಸದ ಅನಂತಕುಮಾರ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಮತ್ತು ಐ.ಆರ್.ಬಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಅಸಮರ್ಪಕ ಕಾಮಗಾರಿಯಿಂದಾಗಿ ಜನರು ತೊಂದರೆ ಅನುಭವಿಸುವಂತೆ ಆಗಬಾರದು ಮಳೆಗಾಲದ ನೀರು ಸರಿಯಾಗಿ ಸಮುದ್ರ ಸೇರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಮಾತನಾಡಿ ಕಾರವಾರ ಮತ್ತು ಅಂಕೋಲಾ ಭಾಗದಲ್ಲಿ ಸರಿಯಾದ ರೀತಿಯಲ್ಲಿ ಕಾಮಗಾರಿ ನಿರ್ವಹಿಸದ ಕಾರಣ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ,ಹೆದ್ದಾರಿ ಪಕ್ಕದಲ್ಲಿ ಚರಂಡಿ ನಿರ್ಮಿಸಬೇಕು.
ಚೆಂಡಿಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಜ ಕಾಲುವೆ ಮೂಲಕ ನೀರು ಸಮುದ್ರ ಸೇರುತ್ತಿತ್ತು ಇದೀಗ ರಸ್ತೆ ಕಾಮಗಾರಿಯಿಂದಾಗಿ ನೀರು ಹರಿದು ಹೋಗಲು ಸಾಧ್ಯವಾಗದೇ ರಸ್ತೆ ಮೇಲೆ ಜನವಸತಿ ಪ್ರದೇಶದಲ್ಲಿ ನೀರು ನಿಲ್ಲುವಂತಾಗಿದೆ ಎಂದು ಸಂಸದರ ಗಮನಕ್ಕೆ ತಂದರು.
ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠೆ ಡಾ ಸುಮನ್ ಪನ್ನೇಕರ್ ಮೊದಲಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!