ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನ ಟೇಕಾಫ್ ಸಂದರ್ಭ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ಶನಿವಾರ ರಾಂಚಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿoಗ್ ಮಾಡಿದೆ.
ವಿಮಾನದಲ್ಲಿ ಒಟ್ಟು 62 ಪ್ರಯಾಣಿಕರಿದ್ದರು. ಟೇಕಾಫ್ ಆಗುತ್ತಿದ್ದಂತೆ ವಿಮಾನದ ಹವಾ ನಿಯಂತ್ರಣ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತಕ್ಷಣವೇ ವಿಮಾನವನ್ನು ಭೂಸ್ಪರ್ಶ ಮಾಡಲಾಗಿದೆ. ದೋಷ ನಿವಾರಣೆಯಾದ ಬಳಿಕ ವಿಮಾನ ಮತ್ತೆ ಪ್ರಯಾಣ ಬೆಳೆಸಲಿದ್ದು, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ ಎಂದು ರಾಂಚಿ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಶರ್ಮಾ ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ