Monday, August 8, 2022

Latest Posts

ಮೊದಲ ‘ಫತ್ವಾ’ದಲ್ಲೇ ತಾಲಿಬಾನಿಗಳ ಕರಾಳ ಮುಖ ಬಯಲು: ವಿಶ್ವವಿದ್ಯಾನಿಲಯಗಳಲ್ಲಿ ‘ಸಹ-ಶಿಕ್ಷಣ’ ನಿಷೇಧ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವುದಾಗಿ ಹೇಳಿಕೊಂಡಿದ್ದ ತಾಲಿಬಾನಿಗಳು ಕೆಲವು ದಿನಗಳ ನಂತರ, ಹಿರಾಟ್ ಪ್ರಾಂತ್ಯದ ಅಧಿಕಾರಿಗಳು ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳಲ್ಲಿ ಸಹ-ಶಿಕ್ಷಣ (co-education) ನಿಷೇಧಿಸಿದ್ದಾರೆ.
ಇದನ್ನು ‘ಸಮಾಜದಲ್ಲಿನ ಎಲ್ಲಾ ಅನಿಷ್ಟಗಳ ಮೂಲ’ ಎಂದು ಅವರು ಹೇಳ್ಕೊಂಡಿದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರು, ಅಧಿಕಾರಿಗಳು, ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರ ಜೊತೆಗೆ ಚರ್ಚೆ ನಡೆಸಿ ವಿಶ್ವವಿದ್ಯಾಲಯಗಳಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳು ಒಟ್ಟಿಗೆ ಕಲಿಯುವ ವ್ಯವಸ್ಥೆಯನ್ನು ನಿಷೇಧಿಸಿರುವುದಾಗಿ ಹೇಳಲಾಗಿದೆ.
ಕಳೆದ ವಾರ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ತಾಲಿಬಾನ್ ಹೊರಡಿಸಿದ ಮೊದಲ ‘ಫತ್ವಾ’ ಇದಾಗಿದೆ. ಮಂಗಳವಾರ, ಜಬೀಉಲ್ಲಾ ಮುಜಾಹಿದ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಾಲಿಬಾನ್ ಇಸ್ಲಾಮಿಕ್ ಕಾನೂನಿನ ನಿಯಮಗಳ ಅಡಿಯಲ್ಲಿ ಮಹಿಳಾ ಹಕ್ಕುಗಳನ್ನು ಗೌರವಿಸುವುದಾಗಿ ಭರವಸೆ ನೀಡಿದ್ದರು.
ಮಹಿಳಾ ಶಿಕ್ಷಕರು ಮತ್ತು ಉಪನ್ಯಾಸಕಿಯರು ಕೇವಲ ಹೆಣ್ಣುಮಕ್ಕಳಿಗೆ ಮಾತ್ರ ಕಲಿಸಬೇಕು. ಗಂಡು ಮಕ್ಕಳಿಗೆ ಕಲಿಸಲು ಅವಕಾಶ ಇರುವುದಿಲ್ಲವೆನ್ನಲಾಗಿದೆ.ಫರೀದ್ ಸಹ-ಶಿಕ್ಷಣವನ್ನು ‘ಸಮಾಜದಲ್ಲಿನ ಎಲ್ಲಾ ಅನಿಷ್ಟಗಳ ಮೂಲ’ ಎಂದು ಕರೆದಿದ್ದಾರೆ ಎಂದು ವರದಿ ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss