ಅಫ್ಘಾನ್ ನಲ್ಲಿ ಮಹಿಳೆಯರಿಗೆ ಚಾಲನಾ ಪರವಾನಗಿ ರದ್ದು ಮಾಡಿದ ತಾಲಿಬಾನ್​!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಮಹಿಳೆಯರ ಶಿಕ್ಷಣವನ್ನು 6ನೇ ತರಗತಿವರೆಗೆ ನಿರ್ಬಂಧಿಸಿ ಆದೇಶಿಸಿದ ಬಳಿಕ ಇದೀಗ, ಮಹಿಳೆಯರಿಗೆ ಚಾಲನಾ ಪರವಾನಗಿಯನ್ನೂ ನಿಷೇಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ನೀಡುವುದನ್ನು ನಿಲ್ಲಿಸಲಾಗಿದೆ.
ತಾಲಿಬಾನ್​ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮುಂದುವರಿದಿದೆ. ಅದರಲ್ಲೂ ಮಹಿಳೆಯರ ವಿರುದ್ಧ ಇನ್ನಿಲ್ಲದ ನಿಯಮಗಳನ್ನು ಜಾರಿ ಮಾಡುತ್ತಲೇ ಇದೆ. ಮಹಿಳೆಯರಿಗೆ ಆರನೇ ತರಗತಿಗಿಂತ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೋಗುವುದನ್ನು ನಿಷೇಧಿಸಿತ್ತು. ಇದು ವಿಶ್ವಾದ್ಯಂತ ಖಂಡನೆಗೆ ಕಾರಣವಾಗಿತ್ತು. ಶಿಕ್ಷಕರ ಕೊರತೆಯ ಕಾರಣ ಈ ರೀತಿ ಮಾಡಲಾಗಿದೆ. ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಬಯಸುವ ಹೆಣ್ಣುಮಕ್ಕಳಿಗೆ ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!