ಕಾಂಗ್ರೆಸ್‌ನಿಂದ ತಾಲಿಬಾನ್ ಮಾದರಿ ಟ್ರೈಲರ್ ಬಿಡುಗಡೆ: ಸಿ.ಟಿ. ರವಿ ಟೀಕೆ

ಹೊಸದಿಗಂತ ವರದಿ, ಮಂಡ್ಯ :

ಪ್ರಧಾನಿ ನರೇಂದ್ರಮೋದಿ ಅವರು ದೇಶದ ಅಭಿವೃದ್ಧಿಯ ಟ್ರೈಲರ್ ಬಿಡುಗಡೆ ಮಾಡಿದರೆ, ಕಾಂಗ್ರೆಸ್ ತಾಲಿಬಾನ್ ಮಾದರಿ ಆಡಳಿತದ ಟ್ರೈಲರ್ ಬಿಡುಗಡೆ ಮಾಡಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದರು.

ನಗರದ ಖಾಸಗೀ ಹೊಟೇಲ್‌ನಲ್ಲಿ ನಡೆದ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ರಾಜ್ಯದ ಜನರ ನೆಮ್ಮದಿಗಿಂತ ವೋಟ್‌ಬ್ಯಾಂಕ್ ರಕ್ಷಣೆಯೇ ಮುಖ್ಯವಾಗಿದೆ. ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರೇ ರಾಜ್ಯದಲ್ಲಿ ಶಾಂತಿ ಎಲ್ಲಿದೆ ಎಂದು ಪ್ರಶ್ನಿಸಿದರು.

ಹನುಮಾನ್‌ಚಾಲೀಸ ಹೇಳಿದವರ ಮೇಲೆ ಹಲ್ಲೆ, ಕೇಸರಿ ಶಾಲು ಧರಿಸಿದ ಮಾತ್ರಕ್ಕೆ ಕೊಲೆ ಮಾಡುವುದು, ಲವ್ ಜಿಹಾದ್‌ಗೆ ಒಪ್ಪದ ಹೆಣ್ಣು ಮಕ್ಕಳ ಹತ್ಯೆ, ಕೆಫೆಯಲ್ಲಿ ಬಾಂಬ್ ಇಡುವುದು ಸೇರಿದಂತೆ ಹಲವಾರು ದೇಶ ವಿರೋಧಿ ಚಟುವಟಿಕೆ ನಡೆಸುವವರನ್ನು ಕಾಂಗ್ರೆಸ್ ರಕ್ಷಣೆ ಮಾಡುತ್ತಿದೆ. ಇವೆಲ್ಲವೂ ತಾಲಿಬಾನ್ ಸರ್ಕಾರದ ಮಾದರಿಯೇ ಎಂದು ಹೇಳಿದರು.

ಕೆಫೆಯಲ್ಲಿ ಬಾಂಬ್ ಇಟ್ಟ ಆರೋಪಿಗಳನ್ನು ಎನ್‌ಐಎ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅವರು ಐಸಿಸ್ ಸಹಯೋಗದೊಂದಿಗೆ ಇಂಡಿಯನ್ ಮುಜಾಹಿದ್ ಸಂಘಟನೆಯ ಬೆಂಬಲ ಪಡೆದು ಭಯೋತ್ಪಾದಕ ಕೃತ್ಯವೆಸಗಲು ದೊಡ್ಡ ಮಟ್ಟದ ತಾಲೀಮು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇಂತಹ ದೇಶವಿರೋಧಿಗಳನ್ನು ಕಾಂಗ್ರೆಸ್ ಬೆಂಬಲಿಸಿ ಬೆಳೆಸುತ್ತಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!