ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಅಫಘಾನಿಸ್ತಾನದಿಂದ ಸೇನಾ ಪಡೆಗಳನ್ನು ಹಿಂಪಡೆಯಲು ಹೆಚ್ಚುವರಿ ಸಮಯ ಕೋರುವಂತಿಲ್ಲ ಎಂದು ತಾಲಿಬಾನ್ ಅಮೆರಿಕ ಹಾಗೂ ಬ್ರಿಟನ್ಗೆ ಎಚ್ಚರಿಸಿದೆ.
ಆ.31 ರವೇಳೆಗೆ ಸೇನಾ ಪಡೆಗಳು ವಾಪಸಾಗಬೇಕು. ಹೆಚ್ಚುವರಿ ಸಮಯ ಕೋರಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತಾಲಿಬಾನ್ ಹೇಳಿದೆ.
ಸೇನಾ ಪಡೆಗಳನ್ನು ಹಿಂಪಡೆಯುವುದಕ್ಕೆ ಆ.31ರ ಅಂತಿಮ ಗಡುವನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ. ಈಗಾಗಲೇ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಹೇಳಿದಂತೆ ಅಂದು ಸೇನೆ ವಾಪಸ್ ಪಡೆಯಬೇಕು ಎಂದಿದ್ದಾರೆ.
ಇಷ್ಟಾಗಿಯೂ ಬ್ರಿಟನ್ ಅಥವಾ ಅಮೆರಿಕ ನಮ್ಮ ಎದುರು ನಿಂತರೆ ಪರಿಣಾಮಗಳಿಗೆ ಅವರೇ ಕಾರಣರಾಗಿರುತ್ತಾರೆ ಎಂದು ತಾಲಿಬಾನ್ ವಕ್ತಾರ ಸುಹೇಲ್ ಶಾಹಿನ್ ಎಚ್ಚರಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ವಿದೇಶಿ ಪ್ರಜೆಗಳನ್ನು ಕರೆಸಿಕೊಳ್ಳುವುದಕ್ಕೆ ಆ.31 ರ ಗಡುವು ಎಂದು ಹೇಳಲಾಗಿತ್ತು. ಆದರೆ ಸಮಯ ಕಡಿಮೆ ಇರುವುದರಿಂದ ಗಡುವು ವಿಸ್ತರಿಸಿಕೊಳ್ಳಿ ಎನ್ನುವ ಒತ್ತಾಯ ಕೇಳಿಬರುತ್ತಿದೆ.