ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಲೋಕಸಭಾ ಅಧಿವೇಶನಕ್ಕೆ ಪ್ಯಾಲೆಸ್ತೀನ್ ಎಂದು ಬರೆದಿದ್ದ ಬ್ಯಾಗ್ ಹಾಕಿಕೊಂಡು ಬಂದಿದ್ದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಬಿಜೆಪಿ ಮತ್ತು ಇತರರಿಂದ ಟೀಕೆ ವ್ಯಕ್ತವಾಗಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಈ ಕಸದ ಬಗ್ಗೆ ಮಾತನಾಡುವ ಬದಲು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಸರ್ಕಾರ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಬಾಂಗ್ಲಾದೇಶದೊಂದಿಗೆ ಮಾತನಾಡಬೇಕು ಎಂದು ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ಹಿಂದುಗಳ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಏನಾದರೂ ಮಾಡಬೇಕು. ಈ ಬಗ್ಗೆ ಬಾಂಗ್ಲಾದೇಶ ಸರ್ಕಾರದ ಜೊತೆ ಮಾತುಕತೆ ನಡೆಸಬೇಕು ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಅನ್ನು ಹಾಕಿಕೊಂಡು ಹೋಗುತ್ತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ, ಬಿಜೆಪಿ ಮತ್ತು ಇತರರಿಂದ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಮೊದಲ ಹೇಳಿಕೆಯನ್ನು ನೀಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯದ ಬಗ್ಗೆ ಏನಾದರೂ ಮಾಡುವಂತೆ ಮನವಿ ಮಾಡಿದ್ದಾರೆ.