Friday, August 19, 2022

Latest Posts

ಇಂದು ಕರ್ನಾಟಕ ಸೇರಿ ಆರು ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್: 

ರಾಜ್ಯಗಳಲ್ಲಿನ ಕೋವಿಡ್ -19 ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕ ಸೇರಿದಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳದ ಮುಖ್ಯಮಂತ್ರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ವೀಡಿಯೊ ಕಾನ್ಫರೆನ್ಸ್ ಮೂಲಕ  ಆರು ರಾಜ್ಯಗಳ ಸಿಎಂ ಭಾಗಿಯಾಗಲಿದ್ದಾರೆ.

ಕಳೆದ ಮಂಗಳವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸೋಂಕು ಹೆಚ್ಚು ಇರುವ ಮತ್ತೊಂದು ಎಂಟು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಸಂವಹನ ನಡೆಸಿದ್ದರು.  ಸಾಂಕ್ರಾಮಿಕ ರೋಗವನ್ನು ಎದುರಿಸಲು ವ್ಯಾಕ್ಸಿನೇಷನ್ ಡ್ರೈವ್ ಅನ್ನು ನಿರಂತರವಾಗಿ ಹೆಚ್ಚಿಸುವ ಅಗತ್ಯವಿದೆ ಎಂದು ಹೇಳಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!