ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಶೋಭೆಯಲ್ಲ: ಸಿದ್ದು ವಿರುದ್ಧ ಬಿಎಸ್‌ವೈ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಲಿಂಗಾಯತ ಮುಖ್ಯಮಂತ್ರಿ ವಿಚಾರದ ಕುರಿತಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಸಿದ್ದರಾಮಯ್ಯ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗಾಗಲೇ ಸೋಲು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ವೀರಶೈವ ಸಮಾಜದವರು ನಮ್ಮ ಜೊತೆ ಇದ್ದಾರೆ ಅನ್ನೋ ಕಾರಣಕ್ಕೆ ಹಗುರವಾಗಿ ಮಾತನಾಡಬಾರದು. ಶೆಟ್ಟರ್ ಹಾಗೂ ಸವದಿ ಸೇರಿದರೆ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಅರ್ಥವಲ್ಲ. ಇನ್ನಾದರೂ ಸಿದ್ದರಾಮಯ್ಯ ಜವಬ್ದಾರಿಯುತವಾಗಿ ಮಾತನಾಡಬೇಕು ಎಂದರು.

ಮೋದಿ, ಅಮಿತ್ ಶಾ, ನಡ್ಡಾ ಎಲ್ಲರೂ ರಾಜ್ಯಕ್ಕೆ ಎಂಟ್ರಿಕೊಟ್ಟಿದ್ದಾರೆ. ನಮ್ಮ ಗೆಲುವು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!