ಉಕ್ರೇನ್ ವಿಚಾರದಲ್ಲಿ ಮಾತುಕತೆಯೊಂದೇ ಏಕೈಕ ಮಾರ್ಗ: ರಷ್ಯಾ ಅಧ್ಯಕ್ಷ ಪುಟಿನ್​​ಗೆ ಕರೆ ಮಾಡಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿಅವರು ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜತೆ ದೂರವಾಣಿ ಕರೆ ಮೂಲಕ ಮಾತನಾಡಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ , ಉಕ್ರೇನ್ ವಿಷಯದಲ್ಲಿ ಮಾತುಕತೆಯೊಂದೇ ಇರುವ ಏಕೈಕ ಮಾರ್ಗ ಎಂದುರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೆ ತಿಳಿಸಿದ್ದಾರೆ.

ಎಸ್‌ಸಿಒ ಶೃಂಗಸಭೆಯ (SCO Summit) ಹಿನ್ನಲೆಯಲ್ಲಿ ಸಮರ್‌ಕಂಡ್‌ನಲ್ಲಿ ತಮ್ಮ ಸಭೆಯ ನಂತರ, ಇಬ್ಬರೂ ನಾಯಕರುಇಂಧನ ಸಹಕಾರ, ವಾಣಿಜ್ಯ ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತಾ ಸಹಕಾರ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿದ್ದರು.

ದೂರವಾಣಿ ಕರೆಯಲ್ಲಿ ಪ್ರಧಾನಿ ಮೋದಿ ಭಾರತದ ಅಧ್ಯಕ್ಷತೆಯಲ್ಲಿರುವ ಜಿ-20ಗೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದು, ಭಾರತದ ಆದ್ಯತೆಗಳನ್ನು ವಿವರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!