March 27, 2026
Friday, March 27, 2026
spot_img

ಸಿಎಂ ಸಿದ್ದರಾಮಯ್ಯ ಜೊತೆಗಿನ ಮಾತುಕತೆ ಸಕ್ಸಸ್: ದಾವಣಗೆರೆ ಚುನಾವಣಾ ಅಖಾಡದಿಂದ ಹಿಂದೆ ಸರಿದ ಪೈಲ್ವಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ಉಪಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಇದರ ನಡುವೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಕಾಂಗ್ರೆಸ್ ಗೆ ಬಿಸಿ ಮುಟ್ಟಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದಾರೆ .

ಎಸ್‌ಎಸ್ ಮಲ್ಲಿಕಾರ್ಜುನ ಪುತ್ರ ಸಮರ್ಥ್ ಗೆ ಟಿಕೆಟ್ ನೀಡಿದ್ದಕ್ಕಾಗಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾತುಕತೆ ನಡೆಸಿದ್ದು, ಅಂತಿಮವಾಗಿ ಸಂಧಾನ ಸಕ್ಸಸ್ ಆಗಿದೆ.

ಈ ಹಿಂದೆ ರಿಜ್ವಾನ್ ಅರ್ಷದ್ ಮತ್ತು ಸಲೀಂ ಅಹ್ಮದ್ ಖಾನ್ ಅವರು ಭೇಟಿ ನೀಡಿ ಪೈಲ್ವಾನ್ ಅವರನ್ನು ಮನವೋಲಿಸುವ ಪ್ರಯತ್ನ ನಡೆಸಿದ್ದರು. ಆದರೆ ಅವರ ಮಾತುಕತೆಯೂ ಫಲಪ್ರದವಾಗಿರಲಿಲ್ಲ. ಹೀಗಾಗಿ ಇಂದು ಖುದ್ದು ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಇಳಿದಿದ್ದು, ಮನವೊಲಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ನನಗೆ ಬಹಳ ವರ್ಷಗಳಿಂದ ಸಾದಿಕ್ ಪೈಲ್ವಾನ್ ಅವರು ಪರಿಚಯ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ. ಇದೀಗ ಪಕ್ಷದ ಕೋರಿಕೆ ಮೇರೆಗೆ ನಾಮಪತ್ರ ಹಿಂಪಡೆದಿದ್ದಕ್ಕೆ ಧನ್ಯವಾದ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !