ಹೊಸದಿಗಂತ ವರದಿ, ಕಲಬುರಗಿ:
ತಳವಾರ ಮತ್ತು ಪರಿವಾರ ನಾಯಕ ಜಾತಿಗಳನ್ನು ರಾಜ್ಯದ ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ಕೈ ಬಿಟ್ಟು, ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಗೆ ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಐತಿಹಾಸಿಕ ಹಾಗೂ ಹಲವು ದಶಕಗಳ ಬೇಡಿಕೆ ಸಾಕಾರಗೊಂಡಂತಾಗಿದೆ ಎಂದು ಬಿಜೆಪಿ ರಾಜ್ಯವಕ್ತಾರ, ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹಷ೯ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ತಳವಾರ ಹಾಗೂ ಹಾಗೂ ಪರಿವಾರ ನಾಯಕ ಜಾತಿಗಳನ್ನು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಲಾಗುವುದು ಎಂದು ಭರವಸೆ ನೀಡಲಾಗಿತ್ತು. ಈಗ ನೀಡಲಾಗಿರುವ ಭರವಸೆ ಸಾಕಾರಗೊಳಿಸುವ ಮುಖಾಂತರ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ನಿರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
ತಳವಾರ ಹಾಗೂ ಪರಿಹಾರ ನಾಯಕ ಜಾತಿಗಳ ನ್ನು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಬೇಕೆಂದು ಜನಾಂಗದವರು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರು.