ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿನಿಮಾ ಇಂಡಸ್ಟ್ರಿಯ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರು ನಟ ವಿಜಯ್ ವರ್ಮಾ ಅವರೊಂದಿಗೆ ಬ್ರೇಕ್ ಮಾಡಿಕೊಂಡಿದ್ದಾರೆ.
ಇನ್ನೇನು ಕೆಲವೇ ದಿನಗಳಲ್ಲಿ ಈ ಜೋಡಿ ಮದುವೆ ಆಗಲಿದೆ ಎನ್ನುವ ಸುದ್ದಿ ಹಬ್ಬಿತ್ತು. ಇದೀಗ ಬೇರೆ ಬೇರೆ ಆಗಿದ್ದಾರೆ.
ಹಲವು ದಿನಗಳಿಂದ ತಮನ್ನಾ ಭಾಟಿಯಾ ಹಾಗೂ ವಿಜಯ್ ವರ್ಮಾ ಮಧ್ಯೆ ಭಿನ್ನಾಭಿಪ್ರಾಯ ಇತ್ತು. ಕಳೆದ ವಾರವಷ್ಟೇ ಇಬ್ಬರು ಬ್ರೇಕಪ್ ಮಾಡಿಕೊಂಡರು.ಮುಂದಿನ ದಿನಗಳಲ್ಲಿ ಒಳ್ಳೆಯ ಸ್ನೇಹಿತರಾಗಿ ಇರೋಣ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಲಸ್ಟ್ ಸ್ಟೋರೀಸ್ 2 ಸಿನಿಮಾದಲ್ಲಿ ತಮನ್ನಾ ಮತ್ತು ವಿಜಯ್ ವರ್ಮಾ ಜೊತೆಯಾಗಿ ನಟಿಸಿದ್ದರು. ಎರಡು ವರ್ಷಗಳ ಹಿಂದೆ 2023ರ ಆರಂಭದಲ್ಲೇ ಇಬ್ಬರ ಲವ್ ವಿಚಾರ ಬಹಿರಂಗ ಆಗಿತ್ತು. ಇಬ್ಬರು ಮದುವೆ ಆಗುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು.
ಚಿತ್ರರಂಗದಲ್ಲಿ ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರಿಗೂ ಒಳ್ಳೆಯ ಬೇಡಿಕೆ ಇದೆ. ಸದ್ಯ ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಬ್ರೇಕಪ್ ಮಾಡಿಕೊಂಡಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸಿದೆ.