February 9, 2026
Monday, February 9, 2026
spot_img

ಮೈಸೂರು ಸ್ಯಾಂಡಲ್‌ ಸೋಪ್‌ಗೆ ನಾಳೆಯಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ತಯಾರಿಸುವ ಉತ್ಪನ್ನಗಳಿಗೆ ನಟಿ ತಮನ್ನಾ ಭಾಟಿಯಾ ಪ್ರಚಾರ ರಾಯಭಾರಿಯಾಗಿದ್ದಾರೆ.

ನಾಳೆಯಿಂದ ಎರಡು ವರ್ಷಗಳ ಕಾಲ ತಮನ್ನಾ ರಾಯಭಾರಿಯಾಗಿ ಇರುತ್ತಾರೆ. ಕೆಎಸ್‌ಡಿಎಲ್‌ ವತಿಯಿಂದ ತಯಾರಿಸುವ ನಮ್ಮ ಮೈಸೂರಿನ ಹೆಮ್ಮೆ ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ ನೀಡಲಾಗಿದೆ. ಇದನ್ನು ಕೂಡ ನಾಳೆ ಬಿಡುಗಡೆ ಮಾಡಲಾಗುತ್ತದೆ.

ಕೆಎಸ್‌ಡಿಎಲ್‌ ಸಂಸ್ಥೆಯ ವಾರ್ಷಿಕ ವಹಿವಾಟನ್ನು 2030 ರ ಹೊತ್ತಿಗೆ 5,000 ಕೋಟಿ ರೂ. ಗಳಿಗೆ ಹೆಚ್ಚಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಯುವಜನಾಂಗವನ್ನ ತಲುಪಲು ವ್ಯಾಪಕ ಪ್ರಚಾರ ಆಂದೋಲವನ್ನು ನಡೆಸಲಾಗುತ್ತಿದೆ. ಇದಕ್ಕಾಗಿ, ಸೋಷಿಯಲ್ ಮೀಡಿಯಾದಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ ಹೊಂದಿರುವ ತಾರಾ ವರ್ಚಸ್ಸಿನ ನಟಿ ತಮನ್ನಾ ಅವರನ್ನ ನೇಮಿಸಿಕೊಳ್ಳಲಾಗುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !