ತಮಾಷೆನೇ ನಿಜಾ ಆಯ್ತು: ತರುಣ್ –ಸೋನಲ್ ಲವ್‍ ಸ್ಟೋರಿ ಹೇಗೆ ಶುರುವಾಯಿತು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್ ವೂಡ್ ನಲ್ಲಿ ಮದುವೆ ಗೌಜಿ ಶುರುವಾಗಿದೆ. ಆಗಸ್ಟ್ 10ರಂದು ಆರತಕ್ಷತೆ ಹಾಗೂ ಆಗಸ್ಟ್ 11ರಂದು ನಿರ್ದೇಶಕ ತರುಣ್ -ನಟಿ ಸೋನಲ್ ಅವರ ವಿವಾಹ ಕಾರ್ಯಕ್ರಮ ನಡೆಯಲಿದೆ.

ವಿವಾಹದ ಬಗ್ಗೆ ಮಾಹಿತಿ ನೀಡಲು ಈ ದಂಪತಿ ಸುದ್ದಿಗೋಷ್ಠಿ ಕರೆದಿದ್ದಾರೆ. ಇದರಲ್ಲಿ ಮದುವೆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸೋನಲ್ ಹಾಗೂ ತರುಣ್ ಸುಧೀರ್ ಅವರು ಮೊದಲ ಬಾರಿಗೆ ಭೇಟಿ ಆಗಿದ್ದು ‘ರಾಬರ್ಟ್’ ಸಿನಿಮಾ ಸಂದರ್ಭದಲ್ಲಿ. ತರುಣ್ ಅವರು ‘ರಾಬರ್ಟ್’ ಚಿತ್ರ ನಿರ್ದೇಶನ ಮಾಡಿದರೆ, ಸೋನಲ್ ಮುಖ್ಯ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದರು. ತಮ್ಮ ಜರ್ನಿ ಬಗ್ಗೆ, ಮದುವೆ ಬಗ್ಗೆ ಇವರು ಮಾಹಿತಿ ನೀಡಿದ್ದಾರೆ.

ಈ ಜೋಡಿಯ ಲವ್ ಸ್ಟೋರಿಗೆ ದರ್ಶನ್ ಕಾರಣವಂತೆ. ರಾಬರ್ಟ್‌ ಸೆಟ್ ನಲ್ಲಿ ದರ್ಶನ್ ಸರ್ ತಮಾಷೆಯಾಗಿ ರೇಗಿಸ್ತಿದ್ರು. ಸೋನಾಲ್ ಮದುವೆ ಮಾಡಿಕೊಳ್ತಿಯಾ ಅಂತ ರೇಗಿಸ್ತಿದ್ರು. ಸೋನಾಲ್ ಯಾವ ಸೆಟ್ ಗೆ ಹೋದ್ರೂ ಮದ್ವೆ ಬಗ್ಗೆ ಕೇಳ್ತಿದ್ರಂತೆ. ಸೋನಾಲ್ ಫೋನ್ ಮಾಡಿ ಅವತ್ತು ರೂಮರ್ಸ್ ಬಗ್ಗೆ ಹೇಳಿದ್ರು. 2023 ಜನವರಿಯಲ್ಲಿ ಮತ್ತಷ್ಟು ಕ್ಲೋಸ್ ಆಗ್ತಾ ಹೋದ್ವಿ. ಅವ್ರ ಪ್ರೂಚರ್, ಫ್ಯಾಮಿಲಿ ಬಗ್ಗೆ ನೋಡ್ತಾ ಬಂದ್ವಿ. ಕಾಟೇರ ರಿಲೀಸ್ ಆಗೋವರೆಗೂ ಮದುವೆಗೆ ಟೈಂ ಕೇಳಿದ್ದೆ. ಕಾಟೇರ ಸಿನಿಮಾ ರೆಸ್ಪಾನ್ಸ್ ಮೇಲೆ ನನ್ ಮದ್ವೆಗೆ ಡಿಸೈಡ್ ಮಾಡಿದ್ದು. ದರ್ಶನ್ ಸರ್ ಕೂಡಾ ಸೋನಲ್ ಮನೇಲಿ ಮಾತಾಡಿದ್ರು. ಫೈನಲಿ ಈಗ ಫ್ಯಾಮಿಲಿಯಲ್ಲಿ ಮಾತುಕತೆ ಮಾಡಿ ಮದುವೆಗೆ ನಿರ್ಧಾರ ಮಾಡಿದ್ವಿ ಎಂದು ತರುಣ್ ಹೇಳಿದರು.

ಲವ್ ಮತ್ತು ಮದುವೆ ಕುರಿತಂತೆ ಮಾತಾಡಿದ ಸೋನಲ್ ಮಂಥೆರೋ ‘ನಾವು ಟಚ್ ಅಲ್ಲಿ ಇರ್ತಿರಲಿಲ್ಲ. ರಾಬರ್ಟ್ ಸಿನಿಮಾ ಟೈಮ್ ನಲ್ಲಿ ದರ್ಶನ್ ಸರ್ ತಮಾಷೆ ಮಾಡ್ತಿದ್ರು. ರೀಸೆಂಟ್ ಆಗಿ ಎಲ್ರು ಹೇಳೋದನ್ನ ಒಮ್ಮೆ ಥಿಂಕ್ ಮಾಡೋಣ ಅಂತ ಟ್ರೈ ಮಾಡಿದ್ವಿ. ನಾವು ನಮ್ಮ ಲವ್ ನ ಸೀಕ್ರೆಟ್ ಆಗಿ ಇಡೋದು ನನ್ನ ಡಿಸಿಷನ್ ಆಗಿತ್ತು. ಮದ್ವೆ ಆದ್ಮೇಲೂ ಸಿನಿಮಾ ನಿಲ್ಲಸಲ್ಲ ಮಾಡ್ತೀನಿ. ದರ್ಶನ್ ಸರ್ ನ ತರುಣ್ ಮೀಟ್ ಆಗಿದ್ದಾರೆ. ನನಗೆ ಅಲ್ಲಿ‌ಹೋಗೋಕೆ ಅವ್ರನ್ನ ಆತರ ನೋಡೋಕೆ ಇಷ್ಟ ಇಲ್ಲ. ಅವ್ರು ಅಷ್ಟರಲ್ಲಿ ಬರ್ತಾರೆ ಅನ್ನಿಸುತ್ತೆ ನೋಡೋಣ’ ಹೇಳಿದರು.

ದರ್ಶನ್ ಸರ್ ಎಲ್ಲಿದ್ರೂ ಅವ್ರ ವಿಶಸ್ ಇರುತ್ತೆ. ದರ್ಶನ್ ಸರ್ ಆಶೀರ್ವಾದ ಯಾವಾಗ್ಲೂ ಇರುತ್ತೆ. ನಮ್ ತಂದೆಯಷ್ಟೇ ದರ್ಶನ್ ಸರ್ ನ ಗೌರವಿಸ್ತೀನಿ. ಬಾಬಿಗೆ (ವಿಜಯಲಕ್ಷ್ಮಿ) ಇನ್ವಿಟೇಷನ್ ಕೊಟ್ಟಿದ್ದೀನಿ. ಅವ್ರು ಬರ್ತೀನಿ ಅಂದಿದಾರೆ. ಬೆಂಗಳೂರಿನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಆಗ್ತೀವಿ. ಬೆಂಗಳೂರಿನಲ್ಲಿ ಮದುವೆ ನಂತರ ಮಂಗಳೂರಿನಲ್ಲೂ ಒಂದು ಫಂಕ್ಷನ್ ಮಾಡ್ತೇವೆ ಎಂದು ತರುಣ್ ಮತ್ತು ಸೋನಲ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!