ಹೊಸದಿಗಂತ ಡಿಜಿಟಲ್ ಡೆಸ್ಕ್:
ರಜನಿಕಾಂತ್ ಪುತ್ರಿ ಐಶ್ವರ್ಯ ರಜನಿಕಾಂತ್ (Aishwarya Rajinikanth) ನಟ ಧನುಷ್ (Dhanush) ಅವರಿಂದ ದೂರವಾಗುವುದು ಖಚಿತವಾಗಿದೆ.
ಜನವರಿ 2022 ರಂದು ತಾವಿಬ್ಬರೂ ದೂರ ಆಗುತ್ತಿರುವ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು ಐಶ್ವರ್ಯ ರಜನಿಕಾಂತ್ (Aishwarya Rajinikanth). ಅದಾದ ನಂತರ ಇಬ್ಬರನ್ನೂ ಒಟ್ಟಾಗಿಸುವ ಪ್ರಯತ್ನ ನಡೆಯಿತು. ಸ್ವತಃ ರಜನಿಕಾಂತ್ ಅವರೇ ಇಬ್ಬರೊಂದಿಗೂ ಮಾತನಾಡಿದ್ದರು. ಆದರೆ, ಪ್ರಯತ್ನ ವಿಫಲವಾಗಿತ್ತು.
ಇದೀಗ ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ (Divorce) ಅರ್ಜಿ ಸಲ್ಲಿಸಿದ್ದಾರೆ ಎಂದು ಆಪ್ತರು ಖಚಿತ ಪಡಿಸಿದ್ದಾರೆ . ಪರಸ್ಪರ ಒಪ್ಪಿಗೆಯಿಂದ ಸೆಕ್ಷನ್ 13 ಬಿ ಅಡಿಯಲ್ಲಿ ಅವರು ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿ ಲಿಂಗ ಮತ್ತು ಯಾತ್ರಾ ಹೆಸರಿನ ಇಬ್ಬರು ಪುತ್ರರೂ ಇದ್ದಾರೆ. ಐಶ್ವರ್ಯ ನಿರ್ದೇಶಕಿಯಾಗಿ ಹಲವಾರು ಚಿತ್ರಗಳನ್ನು ಮಾಡಿದ್ದರೆ, ಧನುಷ್ ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಸಾಕಷ್ಟು ಹೆಸರು ಮಾಡಿದ್ದಾರೆ.