ಭಾರತ್ ಜೋಡೋ ಯಾತ್ರೆಗೆ ಸಾಥ್ ಕೊಟ್ಟ ತಮಿಳು ನಟ ಕಮಲ್ ಹಾಸನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಭಾರತ್ ಜೋಡೋ ಯಾತ್ರೆಯಲ್ಲಿ ಇಂದು ತಮಿಳು ಚಿತ್ರರಂಗದ ಸ್ಟಾರ್ ನಟ ಕಮಲ್ ಹಾಸನ್ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.

ಮೆರವಣಿಗೆ ದೆಹಲಿ ಪ್ರವೇಶಿಸುತ್ತಿದ್ದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಹಿರಿಯ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ಭೂಪಿಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ, ರಣದೀಪ್ ಸುರ್ಜೆವಾಲಾ ಪಾಲ್ಗೊಂಡರು.

ಹರಿಯಾಣದ ಫರಿದಾಬಾದ್ ಮೂಲಕ ರಾಷ್ಟ್ರ ರಾಜಧಾನಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯನ್ನು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಸ್ವಾಗತಿಸಿದರು.

ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯು ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಚರಿಸಿ ಈಗ ಹರಿಯಾಣ ಬಳಿಕ ಮತ್ತೆ ದೆಹಲಿ ಪ್ರವೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!