ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳಿನ ಹಾಸ್ಯ ನಟ ವಡಿವೇಲು ಅವರಿಗೆ ಕೊರೋನಾ ಸೊಂಕು ದೃಢಪಟ್ಟಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಾಯ್ ಶೇಖರ್ ರಿಟರ್ನ್ಸ್ ಚಿತ್ರದ ಶೂಟಿಂಗ್ ಗೆಂದು ಲಂಡನ್ ಗೆ ತೆರಳಿದ್ದರು. ಲಂಡನ್ ನಿಂದ ಚೆನ್ನೈ ಗೆ ಮರಳಿದ ಬಳಿಕ ವಿಮಾನ ನಿಲ್ದಾಣದಲ್ಲಿ ಮಾಡಿದ ಟೆಸ್ಟ್ ಮೂಲಕ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ಮಾಹಿತಿ ನೀಡಿದ ವೈದ್ಯರು, ವಡಿವೇಲು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.