Friday, September 19, 2025

ತಮಿಳು ಚಿತ್ರರಂಗದ ಹಾಸ್ಯನಟ ರೋಬೋ ಶಂಕರ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ ರೋಬೋ ಶಂಕರ್ ಇಂದು ಬೆಳಿಗ್ಗೆ ಪೆರುಂಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಆರೋಗ್ಯ ಸಮಸ್ಯೆಗಳ ಹಿನ್ನೆಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಬೆಳಿಗ್ಗೆ 8.30ರ ಸುಮಾರಿಗೆ ನಿಧನರಾದರು. ಅವರ ಅಕಾಲಿಕ ನಿಧನದಿಂದ ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳು ದುಃಖದಲ್ಲಿ ಮುಳುಗಿದ್ದಾರೆ.

ಜಾಂಡೀಸ್‌ನಿಂದ ಬಳಲುತ್ತಿದ್ದ ಶಂಕರ್, ಚಿತ್ರೀಕರಣದ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಕುಸಿದು ಬಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ರಕ್ತದೊತ್ತಡ ಸಮಸ್ಯೆ ಹಾಗೂ ರಕ್ತ ವಾಂತಿ ಕಾಣಿಸಿಕೊಂಡ ಪರಿಣಾಮ ಅವರನ್ನು ಐಸಿಯುವಿಗೆ ಸ್ಥಳಾಂತರಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ ತ್ಯಜಿಸಿದರು.

ಮಧುರೈನಲ್ಲಿ ಜನಿಸಿದ ರೋಬೋ ಶಂಕರ್, ಟಿವಿ ರಿಯಾಲಿಟಿ ಶೋ ‘ಕಲ್ಕಾಪೋವತು ಯಾರು’ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಬಳಿಕ ಅವರು ಚಿತ್ರರಂಗ ಪ್ರವೇಶಿಸಿ ಅಜಿತ್ ಅಭಿನಯದ ವಿಶ್ವಾಸಂ, ಧನುಷ್ ನಟನೆಯ ಮಾರಿ, ಸೂರ್ಯ ನಟನೆಯ ಸಿಂಗಂ 3 ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳಲ್ಲಿ ತಮ್ಮದೇ ಆದ ಹಾಸ್ಯಭರಿತ ಪಾತ್ರಗಳ ಮೂಲಕ ಜನಪ್ರಿಯತೆ ಗಳಿಸಿದ್ದರು.

ಇತ್ತೀಚೆಗೆ ಅವರು ಗಾಡ್ಸ್‌ಜಿಲ್ಲಾ ಚಿತ್ರದ ಚಿತ್ರೀಕರಣದಲ್ಲಿಯೂ ಭಾಗವಹಿಸಿದ್ದರು. ಆದರೆ ಚಿತ್ರೀಕರಣ ಸಮಯದಲ್ಲೇ ತೀವ್ರ ಅಸ್ವಸ್ಥರಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಬೇಕಾಯಿತು.

ಇದನ್ನೂ ಓದಿ