ತಮಿಳುನಾಡಿನಲ್ಲಿ ಸರಕಾರಿ ಉದ್ಯೋಗ ಪಡೆಯಲು ತಮಿಳು ಭಾಷೆ ಕಡ್ಡಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಮಿಳು ಭಾಷೆಯ ಪ್ರಶ್ನೆಪತ್ರಿಕೆಯನ್ನು ಕಡ್ಡಾಯಗೊಳಿಸಿ ತಮಿಳುನಾಡು ವಿಧಾನಸಭೆಯು ಇಂದು (ಶುಕ್ರವಾರ) ಕಾಯ್ದೆಗೆ ತಿದ್ದುಪಡಿ ಮಾಡಿದೆ.

ರಾಜ್ಯ ಸರ್ಕಾರಿ ಸೇವೆಗಳಿಗೆ ನೇಮಕಾತಿಗಾಗಿ ತಮಿಳು ಭಾಷೆಯ (Tamil Language) ಪೇಪರ್‌ನಲ್ಲಿ ತೇರ್ಗಡೆಯಾಗುವುದನ್ನು ಕಡ್ಡಾಯಗೊಳಿಸಲಾಗಿದೆ.

ಯಾವುದೇ ವ್ಯಕ್ತಿಯು ನೇರ ನೇಮಕಾತಿಯ ಮೂಲಕ ಯಾವುದೇ ಸೇವೆಗೆ ನೇಮಕಾತಿಗೆ ಅರ್ಹನಾಗಿರುವುದಿಲ್ಲ. ರಾಜ್ಯದ ಅಧಿಕೃತ ಭಾಷೆ ಅಂದರೆ ತಮಿಳು ಬಗ್ಗೆ ಸಾಕಷ್ಟು ಜ್ಞಾನ ಇರುವುದು ಅಗತ್ಯ ಎಂದು ಸೂಚಿಸಲಾಗಿದೆ. ಇದರಿಂದ ಇನ್ಮುಂದೆ ತಮಿಳು ಭಾಷೆಯ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಆತ ಸರ್ಕಾರಿ ಸೇವೆ ಮತ್ತು ಸರ್ಕಾರಿ ಸ್ವಾಮ್ಯದ ಉದ್ಯಮಗಳಲ್ಲಿ ಕೆಲಸ ಮಾಡಲು ಅರ್ಹರು ಎಂದು ತಮಿಳುನಾಡು ಸರ್ಕಾರ ಪ್ರಕಟಿಸಿದೆ.

2021ರ ಡಿಸೆಂಬರ್ 1ರ ಸರ್ಕಾರಿ ಆದೇಶದ ಪ್ರಕಾರ, ತಮಿಳುನಾಡು ಸರ್ಕಾರ ನಡೆಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 10ನೇ ತರಗತಿಯ ಮಾನದಂಡಗಳಿಗೆ ಅನುಗುಣವಾಗಿ ತಮಿಳು ಭಾಷೆಯ ಪೇಪರ್ ಕಡ್ಡಾಯವಾಗಿದೆ. ಇದರಲ್ಲಿ ಕನಿಷ್ಠ ಶೇ. 40 ಅಂಕ ಪಡೆಯಬೇಕು.

ತಮಿಳುನಾಡಿನ ಎಲ್ಲಾ ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ರಾಜ್ಯ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಶೇ. 100ರಷ್ಟು ತಮಿಳು ಯುವಕರ ನೇಮಕಾತಿಯನ್ನು ಮಾಡಲು ಎಲ್ಲಾ ನೇಮಕಾತಿ ಏಜೆನ್ಸಿಗಳು ನಡೆಸುವ ನೇರ ನೇಮಕಾತಿಗಾಗಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ತಮಿಳು ಭಾಷಾ ಪತ್ರಿಕೆಯನ್ನು ಪರಿಚಯಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!