ಹೊಸ ದಿಗಂತ ಆನ್ ಲೈನ್ ಡೆಸ್ಕ್:
ತಮಿಳುನಾಡು ವಿಧಾನಸಭೆ ಚುನಾವಣೆಗೆ ಇಂದು ಒಂದನೇ ಹಂತದ ಮತದಾನ ಆರಂಭವಾಗಿದ್ದು, ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಮತದಾನ ಮಾಡಿದ್ದಾರೆ.
ರಜನಿಕಾಂತ್ ಚೆನ್ನೈನ ಥೌಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದ ಸ್ಟೆಲ್ಲಾ ಮೇರಿಸ್ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.
ಮಕ್ಕಳ ನೀಧಿ ಮಯ್ಯುಂ ಪಕ್ಷದ ಮುಖ್ಯಸ್ಥ ಹಾಗೂ ನಟ ಕಮಲಹಾಸನ್ ಚೆನ್ನೈನ ತೇಯಾನಮ್ ಪೇಟೆ ಪ್ರೌಢಶಾಲೆ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ಪುತ್ರಿಯರಾದ ಶ್ರುತಿ ಹಾಸನ್ ಮತ್ತು ಅಕ್ಷರ ಹಾಸನ್ ಅವರೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.