ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಶ್ರೀ ಕೃಷ್ಣಮಠಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಶನಿವಾರ ಭೇಟಿ ನೀಡಿ ದೇವರ ದರುಶನ ಪಡೆದರು.
ಬಳಿಕ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂಧ್ರತೀರ್ಥರಿಂದ ಕೋಟಿಗೀತಾ ಲೇಖನಯಜ್ಞ ದೀಕ್ಷೆಯನ್ನು ಪಡೆದರು. ಈ ಸಂದರ್ಭ ಉಡುಪಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಪ್ರ.ಕಾರ್ಯದರ್ಶಿ ಶಶಾಂಕ್ ಶಿವತ್ತಾಯ ಜೊತೆಗಿದ್ದರು.