ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ತತ್ತರಿಸಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಈಗಾಗಲೆ ಮೂರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ನೂರಕ್ಕೂ ಹೆಚ್ಚು ಜಾನುವಾರುಗಳು ಮಳೆಗೆ ಕೊಚ್ಚಿಕೊಂಡು ಹೋಗಿವೆ.
181ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. ಚೆನ್ನೈ ಮತ್ತು ಚೆಂಗಲಪಟ್ಟು ಜಿಲ್ಲೆಯ ರಸ್ತೆಗಳು ಜಲಾವೃತವಾಗಿವೆ, ಚೆನ್ನೈ ನಗರದಲ್ಲಿ 500ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ.
ಮಾಂಡೌಸ್ ಅಬ್ಬರ ಹಿಡಿತಕ್ಕೆ ಬರುತ್ತಿದ್ದು, ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಂಡೌಸ್ ಎಫೆಕ್ಟ್ನಿಂದ ರಾಜ್ಯದಲ್ಲೂ ಮಳೆಯಾಗುತ್ತಿದ್ದು, ಚಳಿಯ ವಾತಾವರಣವಿದೆ.