June 12, 2026
Friday, June 12, 2026
spot_img

ಕೊಲ್ಲೂರು ಮೂಕಾಂಬಿಕೆಯ ದರುಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಐತಿಹಾಸಿಕ ಹಾಗೂ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಚೆನ್ನೈನಿಂದ ಹೊರಟು ಮಧ್ಯಾಹ್ನ ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಬಂದಿಳಿದ ವಿಜಯ್‌ ಅವರಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಅಲ್ಲಿಂದ ರಸ್ತೆ ಮೂಲಕ ಶಕ್ತಿಪೀಠ ಕೊಲ್ಲೂರಿಗೆ ವಿಜಯ್‌ ಆಗಮಿಸಿದ್ದಾರೆ. ದೇವಿಯ ದರುಶನ ಪಡೆದು ವಿಶೇಷ ಪೂಜೆಯನ್ನು ನೆರವೇರಿಸಿದ್ದಾರೆ.

ಸುಪ್ರಸಿದ್ಧ ಶಕ್ತಿಪೀಠವಾದ ಕೊಲ್ಲೂರು ಕ್ಷೇತ್ರಕ್ಕೆ ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿಗಳಾಗಿದ್ದ ಎಂ.ಜಿ. ರಾಮಚಂದ್ರನ್, ಜಾನಕಿ ರಾಮಚಂದ್ರನ್, ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಈವರೆಗೂ ಸಿಎಂ ವಿಜಯ್‌ ಯಾವುದೇ ದೇವಸ್ಥಾನದ ಭೇಟಿಯಲ್ಲಿ ಕಾಣಿಸಿಕೊಂಡಿಲ್ಲ. ಇದೇ ಮೊದಲ ಬಾರಿಗೆ ಕೊಲ್ಲೂರಿಗೆ ಆಗಮಿಸಿ ದೇವರ ದರುಶನ ಪಡೆದಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿ ಕೊಲ್ಲೂರಿಗೆ ವಿಶೇಷ ಪೂಜೆಗ ಆಗಮಿಸಿದ್ದ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತ ಹಾಗೂ ಅವರು ಸಂಚರಿಸುವ ರಸ್ತೆ ಮಾರ್ಗದಲ್ಲಿ ವಿಶೇಷ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !