October 16, 2026
Friday, October 16, 2026
spot_img

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್‌ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಇಂದು ಕೊಲ್ಲೂರು ಮೂಕಾಂಬಿಕೆ ದೇವಿಯ ದರುಶನ ಪಡೆಯಲು ಆಗಮಿಸುತ್ತಿದ್ದಾರೆ. ತಮಿಳುನಾಡಿನ ಎಂಜಿಆರ್‌ ಹಾಗೂ ಜಯಲಲಿತಾ ನಂತರ ಇದೀಗ ಸಿಎಂ ವಿಜಯ್‌ ಕೊಲ್ಲೂರಿಗೆ ಆಗಮಿಸಿ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯ ಒಳಗೆ ವಿಜಯ್‌ ದೇವಿಯ ದರುಶನ ಪಡೆಯಲಿದ್ದಾರೆ. ಇದಕ್ಕಾಗಿ ದೇವಸ್ಥಾನದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮ ಇರುವುದಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ.

ವಿಶೇಷ ಭದ್ರತಾ ವ್ಯವಸ್ಥೆ ಜಾರಿಯಲ್ಲಿ ಇರುವ ಕಾರಣ ಇಂದು ಭಕ್ತರು ದರುಶನಕ್ಕೆ ಬಾರದಂತೆ ಆಡಳಿತ ಮಂಡಳಿ ಮನವಿ ಮಾಡಿದೆ. ಕೊಲ್ಲೂರು ದೇವಸ್ಥಾನ ಸುತ್ತಮುತ್ತ ಬಿಗಿ ಬಂದೋಬಸ್ತ್ ಇದೆ. ತಮಿಳುನಾಡು ಪೊಲೀಸರ ಜೊತೆ ಉಡುಪಿ ಪೊಲೀಸರು ಭದ್ರತೆ ವಹಿಸಿದ್ದಾರೆ.

ದಕ್ಷಿಣ ಭಾರತದ ಪ್ರಮುಖ ಶಕ್ತಿ ಪೀಠಗಳಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಕೂಡ ಒಂದು. ಮೂಕಾಂಬಿಕಾ ದೇವಸ್ಥಾನ ಭಕ್ತಿಯ ಜೊತೆಗೆ ಇತಿಹಾಸ ಮತ್ತು ವೈಭವದ ಸಂಕೇತವಾಗಿಯೂ ಗುರುತಿಸಿಕೊಂಡಿದೆ. ಇಲ್ಲಿಗೆ ಭೇಟಿ ನೀಡಿದರೆ ಸಮಸ್ಯೆಗಳು ಕರಗಿ ಜೀವನ ನಿರಾಳವಾಗುತ್ತದೆ ಎನ್ನುವ ನಂಬಿಕೆ ಇದೆ. ಸಿನಿ ಸೆಲೆಬ್ರಿಟಿಗಳು, ರಾಜಕಾರಣಿಗಳು ಬಂದು ಈ ತಾಯಿಯ ದರುಶನ ಪಡೆಯುತ್ತಾರೆ.

Must Read