Tuesday, October 3, 2023

Latest Posts

ಕಾವೇರಿ ವಿವಾದ: ಕೇಂದ್ರದೊಂದಿಗೆ ಚರ್ಚಿಸಲು ದೆಹಲಿ ತಲುಪಿದ ತಮಿಳುನಾಡು ನಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಕಾವೇರಿ ನದಿ ನೀರು ಹಂಚಿಕೆ ವಿಷಯವಾಗಿ ಚರ್ಚಿಸಲು ತಮಿಳುನಾಡಿನ ಜಲಸಂಪನ್ಮೂಲ ಸಚಿವ ದುರೈ ಮುರುಗನ್ ನೇತೃತ್ವದ ತಮಿಳುನಾಡಿನ ನಿಯೋಗವು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಲು ನವದೆಹಲಿಗೆ ಬಂದಿಳಿದಿದೆ.

ನದಿಯು ಎರಡೂ ರಾಜ್ಯಗಳ ಜನರಿಗೆ ಜೀವನಾಧಾರದ ಪ್ರಮುಖ ಮೂಲವಾಗಿರುವುದರಿಂದ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ.

ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಪುದುಚೇರಿಗಳ ನಡುವಿನ ವೈಯಕ್ತಿಕ ನೀರು ಹಂಚಿಕೆ ಸಾಮರ್ಥ್ಯಗಳಿಗೆ ಸಂಬಂಧಿಸಿದಂತೆ ವಿವಾದಗಳನ್ನು ನಿರ್ಣಯಿಸಲು ಕೇಂದ್ರವು ಜೂನ್ 2, 1990 ರಂದು ಕಾವೇರಿ ಜಲ ವಿವಾದಗಳ ನ್ಯಾಯಾಧಿಕರಣವನ್ನು (CWDT) ರಚಿಸಿತು.

ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ 15 ದಿನಗಳ ಕಾಲ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಶಿಫಾರಸು ಮಾಡಿತ್ತು. ಅದರಂತೆ ಈಗಾಗಲೇ ಸಾಕಷ್ಟು ನೀರು ಹರಿಸಿದ್ದರೂ ಕರ್ನಾಟಕ ಒಂದು ಹನಿ ನೀರನ್ನೂ ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಆರೋಪಿಸಿದರು.

ರಾಜ್ಯದಲ್ಲಿನ ನೀರಿನ ಕೊರತೆಯ ಬಗ್ಗೆ ಕರ್ನಾಟಕ ಸರ್ಕಾರ ಸುಳ್ಳು ಹೇಳುತ್ತಿದೆಯೇ ಎಂಬ ಪ್ರಶ್ನೆಗೆ, ಮುರುಗನ್ ಯಾವುದೇ ಹಿಂಜರಿಕೆಯಿಲ್ಲದೆ, “ಹೌದು, ಅವರು ಸುಳ್ಳು ಹೇಳುತ್ತಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

ಈಗಾಗಲೇ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಕುಸಿದಿದ್ದು, ಕನ್ನಡ ಪರ ಸಂಘಟನೆಗಳು, ಮಂಡ್ಯದ ರೈತರು ಹೋರಾಟ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!