ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ವಿಧಾನಸಭೆ ಚುನಾವಣೆಗೆ ಸಿದ್ಧತೆ ಜೋರಾಗಿರುವ ಮಧ್ಯೆ ಡಿಎಂಕೆ–ಕಾಂಗ್ರೆಸ್ ಮೈತ್ರಿಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ತೀವ್ರ ಚರ್ಚೆಗಳು ನಡೆಯುತ್ತಿವೆ.
ಆಡಳಿತಾರೂಢ ಡಿಎಂಕೆ ಪಕ್ಷವು ಕಾಂಗ್ರೆಸ್ಗೆ 25ರಿಂದ 28 ಸ್ಥಾನಗಳ ಜೊತೆಗೆ ಒಂದು ರಾಜ್ಯಸಭಾ ಸ್ಥಾನ ನೀಡಲು ಸಿದ್ಧವಿದೆ ಎನ್ನಲಾಗಿದೆ. ಆದರೆ ಕಾಂಗ್ರೆಸ್ ಕನಿಷ್ಠ 33 ಅಥವಾ 34 ಸ್ಥಾನಗಳಿಗಿಂತ ಕಡಿಮೆ ಒಪ್ಪಿಕೊಳ್ಳಲು ಸಿದ್ಧವಿಲ್ಲವೆಂಬುದು ತಿಳಿದು ಬಂದಿದೆ.
ಇದನ್ನೂ ಓದಿ:
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಇಂದು ಸಂಜೆಯೊಳಗೆ ಅಂತಿಮ ನಿರ್ಧಾರ ತಿಳಿಸುವಂತೆ ಡಿಎಂಕೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಮೂಲಗಳು ಹೇಳಿವೆ. ಇದೇ ವೇಳೆ, ವಿಸಿಕೆ ಪಕ್ಷವು 12 ಸ್ಥಾನಗಳ ಬೇಡಿಕೆ ಮುಂದಿಟ್ಟಿದೆ. ಮೈತ್ರಿ ಸಮೀಕರಣಗಳು ಅಂತಿಮ ಹಂತಕ್ಕೆ ಬಂದಿರುವುದರಿಂದ, ಇಂದಿನ ತೀರ್ಮಾನ ರಾಜಕೀಯವಾಗಿ ಮಹತ್ವದ್ದಾಗಿರಲಿದೆ.



