ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ವಿರುದುನಗರ ಜಿಲ್ಲಾಧಿಕಾರಿ ಮಾತನಾಡಿ, “ವಿರುದುನಗರ ಜಿಲ್ಲೆಯ ಸತ್ತೂರು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ, ಒಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.
ಘಟನೆ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.