ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಸ್ಟಾಲಿನ್ ಸರ್ಕಾರ ರಾಜಭವನದ ನಡುವಿನ ಸಂಘರ್ಷ ದಿನ ಕಳೆದಂತೆ ಹೆಚ್ಚುತ್ತಿದ್ದು ,ಇದರ ನಡುವೆ ರಾಜ್ಯಪಾಲ ಆರ್ ಎನ್ ರವಿ, ವಿದ್ಯಾರ್ಥಿಗಳಿಗೆ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಕರೆ ನೀಡಿದ್ದಾರೆ.
ಮಧುರೈನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ರವಿ ಅವರು ತಮ್ಮ ಭಾಷಣದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಹೇಳಿದ್ದಾರೆ. ಇದನ್ನು ಕಾಂಗ್ರೆಸ್ ಸೇರಿದಂತೆ ಆಡಳಿತಾರೂಢ ಡಿಎಂಕೆ ನಾಯಕರು ಖಂಡಿಸಿದ್ದಾರೆ.
ರಾಜ್ಯಪಾಲರ ಹೇಳಿಕೆ ಅತ್ಯಂತ ಖಂಡನೀಯ ಎಂದು ಕಾಂಗ್ರೆಸ್ ಶಾಸಕ ಜೆಎಂಎಚ್ ಹಸನ್ ಮೌಲಾನಾ ಹೇಳಿದ್ದಾರೆ. ರಾಜ್ಯಪಾಲರು RSS ಮತ್ತು ಬಿಜೆಪಿಯ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ. ಇಂತಹ ಹೇಳಿಕೆಗಳು ಅವರು ಅಲಂಕರಿಸಿರುವ ಸಾಂವಿಧಾನಿಕ ಹುದ್ದೆಗೆ ತಕ್ಕುದಲ್ಲ ಎಂದರು.