ಡಿಎಂಕೆ ನಾಯಕನ ವಿರುದ್ಧ ತಮಿಳುನಾಡಿನ ರಾಜ್ಯಪಾಲರ ಮಾನನಷ್ಟ ಮೊಕದ್ದಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯಪಾಲರ ವಿರುದ್ಧ ಮಾನನಷ್ಟ ಹೇಳಿಕೆ ನೀಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಡಿಎಂಕೆ ನಾಯಕ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ಚೆನ್ನೈ ನ್ಯಾಯಾಲಯದಲ್ಲಿ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಈ ತಿಂಗಳ ಆರಂಭದಲ್ಲಿ ರಾಜ್ಯ ಅಸೆಂಬ್ಲಿಯಲ್ಲಿ ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿದ ಭಾಷಣ ಮಾಡಿದ ನಂತರ ರವಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಕೃಷ್ಣಮೂರ್ತಿ ಅವರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಡಿಎಂಕೆ ಕೆಲವು ದಿನಗಳ ಹಿಂದೆ ಅಮಾನತುಗೊಳಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!